ಸರ್ಕಾರ ಬಾರ್ ಗಳನ್ನು ಮುಚ್ಚಿಸದೇ ವಿಶ್ವವಿದ್ಯಾಲಯಗಳನ್ನು ಮುಚ್ಚಿಸುತ್ತಿದೆ: ಆರ್.ಅಶೋಕ್ ಆಕ್ರೋಶ - Mahanayaka

ಸರ್ಕಾರ ಬಾರ್ ಗಳನ್ನು ಮುಚ್ಚಿಸದೇ ವಿಶ್ವವಿದ್ಯಾಲಯಗಳನ್ನು ಮುಚ್ಚಿಸುತ್ತಿದೆ: ಆರ್.ಅಶೋಕ್ ಆಕ್ರೋಶ

r ashok
15/02/2025


Provided by

ಬೆಂಗಳೂರು: ಕರ್ನಾಟಕದಲ್ಲಿ ಬಾರ್ ಗಳನ್ನು ಮುಚ್ಚಿಸದ ಸರ್ಕಾರ ವಿಶ್ವವಿದ್ಯಾಲಯಗಳನ್ನು ಮುಚ್ಚಿಸುತ್ತಿದೆ ಎಂದು ವಿಪಕ್ಷ ನಾಯಕ  ಆರ್.ಅಶೋಕ್ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವಿಧಾನಸೌಧದಲ್ಲಿ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರ ವಿಶ್ವವಿದ್ಯಾಲಯಗಳನ್ನು ಮುಚ್ಚುವ ನಿರ್ಧಾರದಿಂದ ನಮ್ಮ ರಾಜ್ಯದ ವಿದ್ಯಾರ್ಥಿಗಳು ಉನ್ನತ ವ್ಯಾಸಂಗಕ್ಕಾಗಿ ಪಕ್ಕದ ರಾಜ್ಯಕ್ಕೆ ವಲಸೆ ಹೋಗಬೇಕಾಗುತ್ತದೆ ಎಂದು ಅವರು ಆತಂಕ ವ್ಯಕ್ತಪಡಿಸಿದರು.

ಸಮ್ಮಾನ್‌, ವಿದ್ಯಾನಿಧಿ ಸೇರಿದಂತೆ ಅನೇಕ ಯೋಜನೆಗಳನ್ನು ಮುಚ್ಚಿ ಹಾಕಿದಂತೆ ಈಗ ಕಾಂಗ್ರೆಸ್ ಸರ್ಕಾರ ವಿಶ್ವವಿದ್ಯಾಲಯಗಳನ್ನು ಮುಚ್ಚುತ್ತಿದೆ. 4 ಲಕ್ಷ ಕೋಟಿ ರೂ. ಗಾತ್ರದ ಬಜೆಟ್‌ ಮಂಡಿಸುವಾಗ, ಅದರಲ್ಲಿ 342 ಕೋಟಿ ರೂ. ಕೊಟ್ಟರೆ ಸಾಕು. ಇಷ್ಟು ಹಣ ಕೊಡಲಾಗದೇ ಇದ್ದಲ್ಲಿ, ಮತ್ತೇಕೆ ಬಜೆಟ್‌ ಮಂಡಿಸಬೇಕು? 3 ಸಾವಿರ ಬಾರ್‌ ಗಳನ್ನು ಮುಚ್ಚುವುದಿಲ್ಲ. ಆದರೆ ವಿವಿಗಳನ್ನು ಮಾತ್ರ ಮುಚ್ಚಲಾಗುತ್ತಿದೆ ಎಂದು ಆರೋಪಿಸಿದರು.

ಯುವಜನರು ಪದವೀಧರರಾಗುವುದನ್ನು ತಪ್ಪಿಸಲು ಈ ರೀತಿ ಮಾಡಲಾಗಿದೆ. ಯಾರೂ ಪದವೀಧರರಾಗದೇ ಇದ್ದಲ್ಲಿ ಯುವನಿಧಿ ಯೋಜನೆಯನ್ನು ನಿಲ್ಲಿಸಬಹುದು ಎಂಬುದು ಇವರ ಚಿಂತನೆಯಾಗಿದೆ ಎಂದು ಅವರು ಆರೋಪಿಸಿದರು.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/BR3b3qhWZWaCzpD1m6N5uu

ಇತ್ತೀಚಿನ ಸುದ್ದಿ