ನಮ್ಮ ರಾಜ್ಯವನ್ನು ರಕ್ಷಿಸಲು ಪ್ರತಿಯೊಬ್ಬ ವ್ಯಕ್ತಿಯೂ ಎದ್ದು ನಿಲ್ಲಬೇಕು: ತಮಿಳುನಾಡು ಸಿಎಂ ಸ್ಟಾಲಿನ್ - Mahanayaka

ನಮ್ಮ ರಾಜ್ಯವನ್ನು ರಕ್ಷಿಸಲು ಪ್ರತಿಯೊಬ್ಬ ವ್ಯಕ್ತಿಯೂ ಎದ್ದು ನಿಲ್ಲಬೇಕು: ತಮಿಳುನಾಡು ಸಿಎಂ ಸ್ಟಾಲಿನ್

28/02/2025


Provided by

ತ್ರಿಭಾಷಾ ನೀತಿಯ ವಿರುದ್ಧದ ಹೋರಾಟದಲ್ಲಿ ರಾಜ್ಯವನ್ನು ರಕ್ಷಿಸಲು ಎದ್ದು ನಿಲ್ಲುವಂತೆ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಶುಕ್ರವಾರ ಜನರನ್ನು ಒತ್ತಾಯಿಸಿದ್ದಾರೆ.
ಈ ಕುರಿತು ವೀಡಿಯೊ ಸಂದೇಶವನ್ನು ಹಂಚಿಕೊಂಡ ತಮಿಳುನಾಡು ಸಿಎಂ, ರಾಜ್ಯವು ಎರಡು ನಿರ್ಣಾಯಕ ಸವಾಲುಗಳನ್ನು ಎದುರಿಸುತ್ತಿದೆ. ಒಂದು ಭಾಷೆ ಮತ್ತು ಇನ್ನೊಂದು ಡಿಲಿಮಿಟೇಶನ್ ವಿರುದ್ಧದ ಹೋರಾಟ ಎಂದಿದ್ದಾರೆ.

ರಾಜ್ಯದ ಸ್ವಾಭಿಮಾನ, ಸಾಮಾಜಿಕ ನ್ಯಾಯ ಮತ್ತು ಜನರ ಕಲ್ಯಾಣ ಯೋಜನೆಗಳನ್ನು ಕ್ಷೇತ್ರ ಪುನರ್ ವಿಂಗಡಣೆ ಮಾಡಬೇಕೆಂದು ಸ್ಟಾಲಿನ್ ಒತ್ತಾಯಿಸಿದ್ದಾರೆ.

“ಇಂದು, ತಮಿಳುನಾಡು ಎರಡು ನಿರ್ಣಾಯಕ ಸವಾಲುಗಳನ್ನು ಎದುರಿಸುತ್ತಿದೆ. ನಮ್ಮ ಜೀವನಾಡಿಯಾದ ಭಾಷೆಗಾಗಿ ಹೋರಾಟ ಮತ್ತು ನಮ್ಮ ಹಕ್ಕಾಗಿರುವ ಡಿಲಿಮಿಟೇಶನ್ ವಿರುದ್ಧದ ಹೋರಾಟ. ನಮ್ಮ ಹೋರಾಟದ ನಿಜವಾದ ಸಾರವನ್ನು ಜನರಿಗೆ ತಿಳಿಸುವಂತೆ ನಾನು ನಿಮ್ಮನ್ನು ಪ್ರಾಮಾಣಿಕವಾಗಿ ಒತ್ತಾಯಿಸುತ್ತೇನೆ. ಕ್ಷೇತ್ರ ಪುನರ್ ವಿಂಗಡಣೆ ನೇರವಾಗಿ ನಮ್ಮ ರಾಜ್ಯದ ಸ್ವಾಭಿಮಾನ, ಸಾಮಾಜಿಕ ನ್ಯಾಯ ಮತ್ತು ಜನರ ಕಲ್ಯಾಣ ಯೋಜನೆಗಳ ಮೇಲೆ ಪರಿಣಾಮ ಬೀರುತ್ತದೆ. ನೀವು ಈ ಸಂದೇಶವನ್ನು ಜನರಿಗೆ ತಲುಪಿಸಬೇಕು. ನಮ್ಮ ರಾಜ್ಯವನ್ನು ರಕ್ಷಿಸಲು ಪ್ರತಿಯೊಬ್ಬ ವ್ಯಕ್ತಿಯೂ ಎದ್ದು ನಿಲ್ಲಬೇಕು” ಎಂದು ಸ್ಟೇನ್ ಎಕ್ಸ್ನಲ್ಲಿ ವೀಡಿಯೊ ಸಂದೇಶದಲ್ಲಿ ಹೇಳಿದ್ದಾರೆ.

 

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/BHOOdLNNvmD17cBJslQgwj

ಇತ್ತೀಚಿನ ಸುದ್ದಿ