ನಿಲ್ಲಿಸಿದ್ದ ಟ್ರಕ್ ಗೆ ಡಿಕ್ಕಿ ಹೊಡೆದ ಲಾರಿ: ಮೂವರು ಸಾವು - Mahanayaka

ನಿಲ್ಲಿಸಿದ್ದ ಟ್ರಕ್ ಗೆ ಡಿಕ್ಕಿ ಹೊಡೆದ ಲಾರಿ: ಮೂವರು ಸಾವು

chithradurga accident
05/03/2025


Provided by

Chitradurga– lorry hits truck: ಚಿತ್ರದುರ್ಗ:  ನಿಂತಿದ್ದ ಟ್ರಕ್ ಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಮೂವರು ಮೃತಪಟ್ಟಿರುವ ದಾರುಣ ಘಟನೆ  ಚಿತ್ರದುರ್ಗ ತಾಲೂಕಿನ ಸಿಬಾರ ಗ್ರಾಮದ ಬಳಿಯಲ್ಲಿ ನಡೆದಿದೆ.

ಲಾರಿ ಚಾಲಕ ಹಾಗೂ ಟ್ರಕ್ ನಲ್ಲಿ ಕಲ್ಲಂಗಡಿ ಸಾಗಿಸುತ್ತಿದ್ದ ಇಬ್ಬರು ಸಾವನ್ನಪ್ಪಿದ್ದಾರೆ.  ಹರ್ಯಾಣ ಮೂಲದ ಟ್ರಕ್ ರಸ್ತೆ ಬದಿಯಲ್ಲಿ ನಿಂತಿತ್ತು. ಇದೇ ವೇಳೆ ದಾವಣಗೆರೆ ಕಡೆಗೆ ಹೊರಟಿದ್ದ ಲಾರಿ, ಟ್ರಕ್ ಗೆ ಹಿಂದಿನಿಂದ ಡಿಕ್ಕಿ ಹೊಡೆದಿದೆ.

ಇಂದು ಬೆಳಿಗ್ಗೆ 5:30ರ ಸುಮಾರಿಗೆ ಈ ದುರ್ಘಟನೆ ನಡೆದಿದೆ. ಲಾರಿ ಚಾಲಕ ಶೇಖರ್  ಮತ್ತು ಟ್ರಕ್ ಚಾಲಕ  ಉತ್ತರ ಪ್ರದೇಶದ ಅಲಿಗಢ ಜಿಲ್ಲೆಯ ಉದಲ ಇಲಿಯಾಸ್ ಪುರದ ನಿವಾಸಿ ಜುಬುರುದ್ದೀನ್(52) ಹಾಗೂ ಕ್ಲೀನರ್ ಮಹಮ್ಮದ್ ಖೈಫ್ ಮೃತಪಟ್ಟವರು ಎಂದು ಗುರುತಿಸಲಾಗಿದೆ.

ಟ್ರಕ್ ನ ಟೈರ್ ಪಂಚರ್ ಆದ ಪರಿಣಾಮ ಚಾಲಕ ಹಾಗೂ ಕ್ಲೀನರ್ ರಸ್ತೆ ಬದಿ ನಿಲ್ಲಿಸಿ ಚಕ್ರ ಬದಲಿಸುತ್ತಿದ್ದರು. ಆದರೆ ಯಾವುದೇ ಸೂಚನೆ ನೀಡದ ಕಾರಣ ಹಿಂದಿನಿಂದ ಬರುತ್ತಿದ್ದ ವಾಹನಗಳಿಗೆ ಟ್ರಕ್ ಕಾಣಿಸುತ್ತಿರಲಿಲ್ಲ. ಹೀಗಾಗಿ ಹಿಂದಿನಿಂದ ಬಂದ ಲಾರಿ ಡಿಕ್ಕಿ ಹೊಡೆದಿದೆ ಎಂದು  ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/BR3b3qhWZWaCzpD1m6N5uu

ಇತ್ತೀಚಿನ ಸುದ್ದಿ