UPSC ಯಿಂದ ಮೆಡಿಕಲ್ ಆಫೀಸರ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ : ಬೇಗ ಅರ್ಜಿ ಸಲ್ಲಿಸಿ - Mahanayaka
3:13 PM Thursday 4 - December 2025

UPSC ಯಿಂದ ಮೆಡಿಕಲ್ ಆಫೀಸರ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ : ಬೇಗ ಅರ್ಜಿ ಸಲ್ಲಿಸಿ

upsc
09/03/2025

UPSC Combined Medical Service recruitment 2025 : ಕೇಂದ್ರ ಲೋಕಸೇವಾ ಆಯೋಗವು ಕಂಬೈನ್ಡ್ ಮೆಡಿಕಲ್ ಸರ್ವಿಸ್ ಎಕ್ಸಾಮಿನೇಷನ್ ಮುಖಾಂತರ ದೇಶಾದ್ಯಂತ ಇರುವ ಒಟ್ಟು 705 ಮೆಡಿಕಲ್ ಆಫೀಸರ್ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲು ಅಧಿಸೂಚನೆ ಹೊರಡಿಸಿದೆ.

ಫೆಬ್ರುವರಿ 19ರಂದು ಅಧಿಸೂಚನೆ ಹೊರಡಿಸಿದ್ದು ಈಗಾಗಲೇ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಆರಂಭವಾಗಿದೆ. ಅದೇ ರೀತಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಮಾರ್ಚ್ 11, 2025 ಆಗಿರುತ್ತದೆ. ಹಾಗಿದ್ದರೆ ಈ ನೇಮಕಾತಿಗೆ ಅರ್ಜಿ ಸಲ್ಲಿಸಲು ಯಾವ ಅಭ್ಯರ್ಥಿಗಳು ಅರ್ಹತೆ ಹೊಂದಿರುತ್ತಾರೆ ಮತ್ತು ಅರ್ಜಿ ಸಲ್ಲಿಸುವ ಮಾಹಿತಿ ಸೇರಿದಂತೆ ಇತರೆ ಮಾಹಿತಿಯನ್ನು ಇಲ್ಲಿ ನೀಡಲಾಗಿದ್ದು ತಿಳಿಯಿರಿ.

ಈ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು :

ಈ ನೇಮಕಾತಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಎಂಬಿಬಿಎಸ್ ಪದವಿ ಮುಗಿಸಿರಬೇಕು ಅಥವಾ ಎಂಬಿಬಿಎಸ್ ಪದವಿಯ ಅಂತಿಮ ಸೆಮಿಸ್ಟರ್ ನಲ್ಲಿ ಓದುತ್ತಿರುವಂತಹ ಅಭ್ಯರ್ಥಿಗಳು ಕೂಡ ಈ ನೇಮಕಾತಿಗೆ ಅರ್ಜಿ ಸಲ್ಲಿಸಲು ಅರ್ಹತೆ ಹೊಂದಿರುತ್ತಾರೆ.

ಅದೇ ರೀತಿ ವಯೋಮಿತಿಯ ಅರ್ಹತೆ ನೋಡುವುದಾದರೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು 32 ವರ್ಷದ ಒಳಗಿರಬೇಕು. ಮೀಸಲಾತಿ ವರ್ಗಗಳಾದ ಓಬಿಸಿ, ಪರಿಶಿಷ್ಟ ಪಂಗಡ ಹಾಗೂ ಇತರೆ ಮೀಸಲಾತಿ ವರ್ಗಗಳ ಅಡಿಯಲ್ಲಿ ಬರುವವರಿಗೆ ಗರಿಷ್ಠ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗುವುದು.

ಈ ನೇಮಕಾತಿಗೆ ಸಂಬಂಧಿಸಿದಂತೆ ಪ್ರಮುಖ ದಿನಾಂಕಗಳು :

• ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ – 11 ಮಾರ್ಚ್ 2025
• ಈ ನೇಮಕಾತಿಯ ಪರೀಕ್ಷಾ ದಿನಾಂಕ – 20 ಜುಲೈ 2025

ನೇಮಕಾತಿ ಪ್ರಕ್ರಿಯೆ ಹೇಗಿರಲಿದೆ?

ಅರ್ಜಿ ಸಲ್ಲಿಸದಂತಹ ಅಭ್ಯರ್ಥಿಗಳು ಮೊದಲನೇ ಹಂತದಲ್ಲಿ 500 ಅಂಕಗಳ ಪರೀಕ್ಷೆಯನ್ನು ಬರೆಯಬೇಕು. ಎರಡನೆಯ ಹಂತದಲ್ಲಿ 100 ಅಂಕಗಳ ವ್ಯಕ್ತಿತ್ವ ಪರೀಕ್ಷೆ ಎದುರಿಸಬೇಕು.

ಅರ್ಜಿ ಶುಲ್ಕ :

• ಸಾಮಾನ್ಯ ವರ್ಗದವರು ಇತರೆ ಹಿಂದುಳಿದ ವರ್ಗದ ಅಭ್ಯರ್ಥಿಗಳು ಹಾಗೂ ಆರ್ಥಿಕವಾಗಿ ಹಿಂದುಳಿದ ಅಭ್ಯರ್ಥಿಗಳು 200 ರೂಪಾಯಿ ಅರ್ಜಿ ಶುಲ್ಕ ಪಾವತಿಸಬೇಕು.
• ಎಲ್ಲ ವರ್ಗದ ಮಹಿಳಾ ಅಭ್ಯರ್ಥಿಗಳು, ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಹಾಗೂ ಅಂಗವಿಕಲ ಅಭ್ಯರ್ಥಿಗಳು ಉಚಿತವಾಗಿ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸುವ ವಿಧಾನ ಹೇಗೆ?

ಅರ್ಹತೆ ಹೊಂದಿರುವಂತಹ ಅಭ್ಯರ್ಥಿಗಳು ಯುಪಿಎಸ್ಸಿ ಯ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ಅರ್ಜಿ ಸಲ್ಲಿಸಿ.

UPSC ಅಧಿಕೃತ ಜಾಲತಾಣ – https://upsconline.gov.in


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/BR3b3qhWZWaCzpD1m6N5uu

ಇತ್ತೀಚಿನ ಸುದ್ದಿ