ಏಪ್ರಿಲ್ 6ರಿಂದ 10ರವರೆಗೆ ರಾಜ್ಯದ ಈ ಜಿಲ್ಲೆಗಳಲ್ಲಿ ಸುರಿಯಲಿದೆ ಮಳೆ | ಹವಾಮಾನ ಮುನ್ಸೂಚನೆ - Mahanayaka

ಏಪ್ರಿಲ್ 6ರಿಂದ 10ರವರೆಗೆ ರಾಜ್ಯದ ಈ ಜಿಲ್ಲೆಗಳಲ್ಲಿ ಸುರಿಯಲಿದೆ ಮಳೆ | ಹವಾಮಾನ ಮುನ್ಸೂಚನೆ

karnataka rain
05/04/2021


Provided by

ಬೆಂಗಳೂರು: ಏಪ್ರಿಲ್ 6ರಿಂದ 10ರವರೆಗೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಮುನ್ಸೂಚನೆ ನೀಡಿದ್ದು, ನಾಳೆಯಿಂದ ಏಪ್ರಿಲ್ 10ರವರೆಗೆ ಮಳೆಯಾಗಲಿದೆ.

ಏಪ್ರಿಲ್ 6 ರಂದು, ಚಾಮರಾಜನಗರ, ಮೈಸೂರು, ಹಾಸನ, ಕೊಡಗು ಹಾಗೂ ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರೈತರು ತಮ್ಮ ಬೆಳೆಗಳನ್ನು ಸಂರಕ್ಷಿಸಿಟ್ಟುಕೊಳ್ಳುವುದು ಉತ್ತಮ.

ಏಪ್ರಿಲ್ 7 ಹಾಗೂ ಏಪ್ರಿಲ್ 8 ರಂದು ದಕ್ಷಿಣ ಕನ್ನಡ, ಉಡುಪಿ ಮತ್ತು ದಕ್ಷಿಣ ಒಳನಾಡು ಭಾಗದ ಚಾಮರಾಜನಗರ, ಹಾಸನ, ಮೈಸೂರು, ಕೊಡಗು ಭಾಗದಲ್ಲಿ ಮಳೆ ಬೀಳಲಿದೆ ಎಂದು ಮುನ್ಸೂಚನೆ ನೀಡಲಾಗಿದೆ.

ಏಪ್ರಿಲ್ 10ರಂದು ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಕಲಬುರಗಿ, ರಾಯಚೂರು, ಚಿಕ್ಕಮಗಳೂರು, ಶಿವಮೊಗ್ಗ, ಮೈಸೂರು, ಕೊಡಗು, ಹಾಸನ, ಬೆಳಗಾವಿ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಇತ್ತೀಚಿನ ಸುದ್ದಿ