ಗುಂಪಿನಿಂದ ವ್ಯಕ್ತಿಯನ್ನು ಥಳಿಸಿ ಹತ್ಯೆ: ರಕ್ಷಿಸಲು ಹೋದ ಪೊಲೀಸ್ ಅಧಿಕಾರಿಯೂ ಸಾವು - Mahanayaka

ಗುಂಪಿನಿಂದ ವ್ಯಕ್ತಿಯನ್ನು ಥಳಿಸಿ ಹತ್ಯೆ: ರಕ್ಷಿಸಲು ಹೋದ ಪೊಲೀಸ್ ಅಧಿಕಾರಿಯೂ ಸಾವು

16/03/2025


Provided by

ಮಧ್ಯಪ್ರದೇಶದ ಮೌಗಂಜ್ ಜಿಲ್ಲೆಯಲ್ಲಿ ಬುಡಕಟ್ಟು ಜನರ ಗುಂಪೊಂದು ವ್ಯಕ್ತಿಯ‌ ಮೇಲೆ ದಾಳಿ ಮಾಡಿ ಅಪಹರಿಸಿ ಕೊಂದಿದೆ. ಇನ್ನು ವ್ಯಕ್ತಿಯನ್ನು ರಕ್ಷಿಸಲು ಪ್ರಯತ್ನಿಸಿದ ಪೊಲೀಸ್ ತಂಡದ ಮೇಲೆ ಕೂಡಾ ದಾಳಿ ನಡೆದಿದ್ದು ಸಹಾಯಕ ಸಬ್ ಇನ್ಸ್ ಪೆಕ್ಟರ್ (ಎಎಸ್ಐ) ಸಾವಿಗೆ ಕಾರಣವಾಗಿದೆ.

ಈ ಘಟನೆ ಶನಿವಾರ ನಡೆದಿದೆ. ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಐವರು ಶಂಕಿತರನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. ರೇವಾ ವಲಯದ ಉಪ ಪೊಲೀಸ್ ಇನ್ಸ್ ಪೆಕ್ಟರ್ ಜನರಲ್ ಸಾಕೇತ್ ಪಾಂಡೆ ಅವರ ಪ್ರಕಾರ, ಎಎಸ್ಐ ಸೇರಿದಂತೆ ಇಬ್ಬರು ಪ್ರಾಣ ಕಳೆದುಕೊಂಡಿದ್ದಾರೆ ಮತ್ತು ಇತರ ಪೊಲೀಸರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ಕೆಲವು ತಿಂಗಳ ಹಿಂದೆ ಅಶೋಕ್ ಕುಮಾರ್ ಎಂಬ ಬುಡಕಟ್ಟು ವ್ಯಕ್ತಿಯನ್ನು ಕೊಂದಿದ್ದಾನೆ ಎಂದು ನಂಬಿ ಕೋಲ್ ಬುಡಕಟ್ಟು ಜನರ ಗುಂಪು ಸನ್ನಿ ದ್ವಿವೇದಿಯನ್ನು ಅಪಹರಿಸಿದೆ ಎಂದು ಮೂಲಗಳು ತಿಳಿಸಿವೆ. ಆದರೆ ಕುಮಾರ್ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ ಎಂದು ಕೂಡಾ ಶಂಕಿಸಲಾಗಿದೆ.

 

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/BHOOdLNNvmD17cBJslQgwj

ಇತ್ತೀಚಿನ ಸುದ್ದಿ