ಜನರಿಗೆ ಏನನ್ನೂ ಉಚಿತವಾಗಿ ನೀಡಬಾರದು: ಆರ್.ವಿ.ದೇಶಪಾಂಡೆ - Mahanayaka

ಜನರಿಗೆ ಏನನ್ನೂ ಉಚಿತವಾಗಿ ನೀಡಬಾರದು: ಆರ್.ವಿ.ದೇಶಪಾಂಡೆ

r v deshapandy
29/03/2025


Provided by

ದಾಂಡೇಲಿ: ಉಚಿತ ಕೊಡುಗೆ ಎಂಬುದು ಅಪಾಯಕಾರಿ ಎಂದು ಕಾಂಗ್ರೆಸ್ ಶಾಸಕ, ಕರ್ನಾಟಕ ರಾಜ್ಯ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಆರ್.ವಿ. ದೇಶಪಾಂಡೆ ಹೇಳಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಯ ಅಂಬೇವಾಡಿಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ಉಚಿತ ಕೊಡುಗೆ ಎಂಬುದು ಅಪಾಯಕಾರಿ ಪದ. ಜನರಿಗೆ ಏನನ್ನೂ ಉಚಿತವಾಗಿ ನೀಡಬಾರದು ಮತ್ತು ಪ್ರತಿಯೊಂದು ಸೇವೆಗೂ ಶುಲ್ಕ ನಿಗದಿಪಡಿಸಬೇಕು ಎಂದು ಆರ್.ವಿ.ದೇಶಪಾಂಡೆ ಅಭಿಪ್ರಾಯಪಟ್ಟಿದ್ದಾರೆ.

ಶಕ್ತಿ ಯೋಜನೆಯಡಿ ಮಹಿಳೆಯರು ಉಚಿತ ಬಸ್ ಪ್ರಯಾಣವನ್ನು ಆನಂದಿಸುತ್ತಿದ್ದಾರೆ. ಈ ಯೋಜನೆಯನ್ನು ಪುರುಷರಿಗೂ ವಿಸ್ತರಿಸಬೇಕೆಂಬ ಬೇಡಿಕೆ ಇತ್ತು. ಎಲ್ಲವನ್ನೂ ಉಚಿತವಾಗಿ ನೀಡಿದರೆ ನಾವು ಸಾರಿಗೆ ಸಂಸ್ಥೆಗಳನ್ನು ನಡೆಸುವುದು ಹೇಗೆ ಎಂದು ಅವರು ಪ್ರಶ್ನಿಸಿದ್ದಾರೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/HEkqDgrW2BlJLad5kZ1DX7

ಇತ್ತೀಚಿನ ಸುದ್ದಿ