ರಸ್ತೆ ಅಪಘಾತ: ಮುಂಬೈನ ಹಿರಿಯ ಪೊಲೀಸ್ ಅಧಿಕಾರಿ ಸುಧಾಕರ್ ಪಠಾರೆ ಸಾವು - Mahanayaka

ರಸ್ತೆ ಅಪಘಾತ: ಮುಂಬೈನ ಹಿರಿಯ ಪೊಲೀಸ್ ಅಧಿಕಾರಿ ಸುಧಾಕರ್ ಪಠಾರೆ ಸಾವು

30/03/2025

ಮುಂಬೈ ಪೊಲೀಸ್ ಬಂದರು ವಲಯದ ಉಪ ಆಯುಕ್ತ ಸುಧಾಕರ್ ಪಠಾರೆ ಅವರು ಇಂದು ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಹೈದರಾಬಾದ್ ನಲ್ಲಿ ಮಧ್ಯಾಹ್ನದ ಸುಮಾರಿಗೆ ಅಪರಿಚಿತ ವಾಹನವು ಅವರ ಕಾರಿಗೆ ಡಿಕ್ಕಿ ಹೊಡೆದಾಗ ಈ ಘಟನೆ ಸಂಭವಿಸಿದೆ. ಅವರು ತರಬೇತಿಗಾಗಿ ನಗರದಲ್ಲಿದ್ದರು. ಅಲ್ಲದೇ ಇಂದು ರಜಾದಿನವಾದ್ದರಿಂದ ಹೊರಗೆ ಹೋಗಿದ್ದರು.

ಮುಂದಿನ ದಿನಗಳಲ್ಲಿ ಪಠಾರೆ ಅವರು ಡೆಪ್ಯುಟಿ ಇನ್ಸ್ ಪೆಕ್ಟರ್ ಜನರಲ್ ಆಗಿ ಬಡ್ತಿ ಆಗಲು ರೆಡಿಯಾಗಿದ್ದರು.

ಪಠಾರೆ ಈ ಪ್ರದೇಶದಲ್ಲಿ ಉಪ ಆಯುಕ್ತರಾಗಿದ್ದ ಅವಧಿಯಲ್ಲಿ ಬದ್ಲಪುರ್ ಕೇಸ್ ನ ಆರೋಪಿ ಅಕ್ಷಯ್ ಶಿಂಧೆ ಅವರನ್ನು ಪೊಲೀಸರು ಎನ್ ಕೌಂಟರ್ ಮಾಡಿದ್ದರು.


Provided by

ಡಿಸಿಪಿ ಪಠಾರೆ ಅವರ ಸಾವಿನ ಬಗ್ಗೆ ಮುಂಬೈ ಪೊಲೀಸರು ಆಘಾತ ವ್ಯಕ್ತಪಡಿಸಿದ್ದಾರೆ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಅವರ ಕೊಡುಗೆಯನ್ನು ಸ್ಮರಿಸಿದ್ದಾರೆ.

 

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/BHOOdLNNvmD17cBJslQgwj

ಇತ್ತೀಚಿನ ಸುದ್ದಿ