ಅನ್ವರ್ ಮಾಣಿಪ್ಪಾಡಿಗೆ ವಿದೇಶಿ ವ್ಯಕ್ತಿಗಳಿಂದ ಬೆದರಿಕೆ ಕರೆ! - Mahanayaka

ಅನ್ವರ್ ಮಾಣಿಪ್ಪಾಡಿಗೆ ವಿದೇಶಿ ವ್ಯಕ್ತಿಗಳಿಂದ ಬೆದರಿಕೆ ಕರೆ!

anwar manippadi
05/04/2025


Provided by

ಬೆಂಗಳೂರು: ಕರ್ನಾಟಕದ ಅಲ್ಪಸಂಖ್ಯಾತ ಆಯೋಗದ ಮಾಜಿ ಅಧ್ಯಕ್ಷ ಅನ್ವರ್ ಮಾಣಿಪ್ಪಾಡಿ ಅವರಿಗೆ ವಿದೇಶಿ ವ್ಯಕ್ತಿಗಳಿಂದ ಬೆದರಿಕೆ ಕರೆಗಳು ಬಂದಿವೆ.

ಕೇಂದ್ರ ಸರ್ಕಾರವು ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ವಕ್ಫ್ ತಿದ್ದುಪಡಿ ಮಸೂದೆಗೆ ಅನುಮೋದನೆ ಪಡೆದ ಬೆನ್ನಲ್ಲೇ ಬೆದರಿಕೆ ಕರೆ ಬಂದಿದ್ದು, ಈ ವಿಚಾರವಾಗಿ ಅನ್ವರ್ ಮಾಣಿಪ್ಪಾಡಿ ಮಂಗಳೂರು ನಗರ ಪೊಲೀಸ್ ಆಯುಕ್ತರಿಗೆ ಮಾಹಿತಿ ನೀಡಿದ್ದಾರೆ.

ಇಂಟರ್ನೆಟ್ ಆಧಾರಿತ ಕರೆ ಮೂಲಕ ಬೆದರಿಕೆ ಕರೆ ಬಂದಿದೆ ಎನ್ನಲಾಗಿದೆ. ಅನ್ವರ್ ಮಾಣಿಪ್ಪಾಡಿ ಅವರು ಸದ್ಯ ಮಂಗಳೂರಿನಲ್ಲಿರುವ ನಿವಾಸದಲ್ಲಿ ವಾಸವಾಗಿದ್ದಾರೆ. ದೂರು ಆಧರಿಸಿದ ಪೊಲೀಸರು, ತನಿಖೆ ಕೈಗೊಂಡಿದ್ದಾರೆ.

ಐತಿಹಾಸಿಕ ವಕ್ಫ್ ತಿದ್ದುಪಡಿ ಮಸೂದೆಯ ಮೇಲೆ ಲೋಕಸಭೆಯಲ್ಲಿ ಚರ್ಚೆ ಮಾಡುವ ಸಂದರ್ಭ ಗೃಹ ಸಚಿವ ಅಮಿತ್ ಶಾ ಕರ್ನಾಟಕದ ವಿಚಾರ ಕೂಡ ಪ್ರಸ್ತಾಪ ಮಾಡಿದ್ದರು. ಅನ್ವರ್ ಮಾಣಿಪ್ಪಾಡಿ ವರದಿ ಉಲ್ಲೇಖಿಸಿ ಪ್ರತಿಪಕ್ಷಗಳಿಗೆ ತಿರುಗೇಟು ನೀಡಿದ್ದರು. ಈ ಎಲ್ಲ ಬೆಳವಣಿಗೆಗಳ ಬೆನ್ನಲ್ಲೇ ಬೆದರಿಕೆ ಕರೆ ಬಂದಿರುವುದು ಚರ್ಚೆಗೆ ಕಾರಣವಾಗಿದೆ.

ಇಂಟರ್ನೆಟ್ ಕರೆ ಮೂಲಕ ನನಗೆ ನಿರಂತರ ಬೆದರಿಕೆ ಬರುತ್ತಾ ಇದೆ. ಹಿಂದಿ, ಮರಾಠಿ, ಇಂಗ್ಲೀಷ್ ಹಾಗೂ ಉತ್ತರ ಭಾರತದ ಭಾಷೆಗಳಲ್ಲಿ ಕರೆಗಳು ಬರುತ್ತಾ ಇವೆ. ಇಂಗ್ಲಿಷ್ ನಲ್ಲಿ ಕರೆ ಮಾಡಿದ ವ್ಯಕ್ತಿ ನೀವು ಹೆಚ್ಚು ದಿನ ಉಳಿಯುವುದಿಲ್ಲ ಎಂದು ಬೆದರಿಕೆ ಹಾಕಿದ್ದಾನೆ. ನಿನ್ನ ಸಮುದಾಯ ನಿನ್ನನ್ನು ಬಿಡಲ್ಲ ಎಂದೆಲ್ಲಾ ಹೇಳಿದ್ದಾನೆ ಎಂದು ಅವರು ತಿಳಿಸಿದ್ದಾರೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/HEkqDgrW2BlJLad5kZ1DX7

ಇತ್ತೀಚಿನ ಸುದ್ದಿ