ಡಾ.ಬಿ.ಆರ್.ಅಂಬೇಡ್ಕರ್ ಚಿಂತನೆ ಜಗತ್ತಿಗೆ ದಾರಿದೀಪ:  ಬಿ.ಕೆ.ಇಮ್ತಿಯಾಜ್ - Mahanayaka
11:15 AM Sunday 14 - September 2025

ಡಾ.ಬಿ.ಆರ್.ಅಂಬೇಡ್ಕರ್ ಚಿಂತನೆ ಜಗತ್ತಿಗೆ ದಾರಿದೀಪ:  ಬಿ.ಕೆ.ಇಮ್ತಿಯಾಜ್

b k Imtiaz
14/04/2025

ಮಂಗಳೂರು: ಡಾ.ಬಿ.ಆರ್. ಅಂಬೇಡ್ಕರ್ ಅವರು ಸಂವಿಧಾನ ಶಿಲ್ಪಿ ಮಾತ್ರವಲ್ಲ ಅವರೊಬ್ಬ ತತ್ವಜ್ಞಾನಿ ಮತ್ತು ದೂರದೃಷ್ಟಿಯ  ಅರ್ಥಶಾಸ್ತ್ರಜ್ಞನಾಗಿದ್ದರು, ಅಂಬೇಡ್ಕರ್ ಚಿಂತನೆಯಿಂದ ಮಾತ್ರ ಭಾರತವನ್ನು ಅಭಿವೃದ್ಧಿಯತ್ತ ಕೊಂಡೊಯ್ಯಲು ಸಾಧ್ಯ ಅಂಬೇಡ್ಕರ್ ಚಿಂತನೆ ಸಾರ್ವಕಾಲಿಕ ಎಂದು ಡಿವೈಎಫ್ಐ ಜಿಲ್ಲಾಧ್ಯಕ್ಷರಾದ ಬಿ.ಕೆ.ಇಮ್ತಿಯಾಜ್ ಹೇಳಿದರು.


Provided by

ಅವರು ಇಂದು ದಕ್ಷಿಣ ಕನ್ನಡ ಜಿಲ್ಲಾ ಬೀದಿಬದಿ ವ್ಯಾಪಾರಸ್ಥರ ಸಂಘದ (ಸಿಐಟಿಯು) ಕಚೇರಿಯಲ್ಲಿ ನಡೆದ  ಸಂವಿಧಾನ ಶಿಲ್ಪಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಮಾತನಾಡುತ್ತಿದ್ದರು.

ಅಂಬೇಡ್ಕರ್ ಅವರ ದೂರದೃಷ್ಟಿಯ ಚಿಂತನೆಗಳಿಂದ ದುರ್ಬಲ ಜನಾಂಗಗಳಿಗೆ ಸ್ವಾಭಿಮಾನದಿ ಬದುಕುವ ಶಕ್ತಿ ಬಂದಿದೆ. ದೇಶದ ದುರ್ಬಲ ವರ್ಗದ ಜನರಿಗೆ ಸರ್ವರಿಗೂ ಸಮಪಾಲು, ಸಮಬಾಳಿನ ಬದುಕು ಸಿಗುವಂತಾಗಲು  ಅಂಬೇಡ್ಕರ್ ಚಿಂತನೆಯ ಆಧಾರದಲ್ಲಿ ದೇಶದಲ್ಲಿ ಪ್ರಬಲ ಚಳುವಳಿ ಕಟ್ಟಬೇಕಿದೆ ಎಂದು ಅವರು ಹೇಳಿದರು.

ಸಂಘದ ಪ್ರಮುಖರಾದ ಮುಜಾಫರ್ ಅಹ್ಮದ್, ಎಂ.ಶಿವಪ್ಪ, ಹಸನ್ ಕುದ್ರೋಳಿ, ವಿಜಯ ಜೈನ್, ಮುತ್ತುರಾಜ್, ರಫೀಕ್, ಹಸನ್ ಕುದ್ರೋಳಿ ಅಬ್ದುಲ್ ಖಾದರ್ ಮತ್ತಿತರರು ಉಪಸ್ಥಿತರಿದ್ದರು.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ