ಉತ್ತರಪ್ರದೇಶದಲ್ಲಿ ಮತ್ತೊಂದು ಗ್ಯಾಂಗ್ ರೇಪ್: ಯುವತಿ ಮೇಲೆ ಐವರಿಂದ ಅತ್ಯಾಚಾರ

16/04/2025
ಹಮೀರಪುರ: ವಾರಾಣಸಿಯಲ್ಲಿ 19 ವರ್ಷದ ಯುವತಿ ಮೇಲೆ 23 ಜನರು ಸತತ ಐದು ದಿನಗಳ ಕಾಲ ಅತ್ಯಾಚಾರ ನಡೆಸಿದ ಪ್ರಕರಣ ಮಾಸುವ ಮುನ್ನವೇ ಇದೀಗ ಹಮೀರ್ಪುರದಲ್ಲೂ ಇಂತಹದ್ದೇ ಘಟನೆಯೊಂದು ನಡೆದಿದೆ.
ಮಂಗಳವಾರ ರಾತ್ರಿ ಬಹಿರ್ದೆಸೆಗೆ ತೆರಳಿದ್ದ 21 ವರ್ಷದ ಯುವತಿ ಮೇಲೆ ಐವರು ಅತ್ಯಾಚಾರ ನಡೆಸಿದ್ದಾರೆ. ಈ ಕುರಿತು ಎಫ್ ಐಆರ್ ದಾಖಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಒಬ್ಬ ಆರೋಪಿಯನ್ನು ಬಂಧಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಯುವತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆಕೆಯ ಆರೋಗ್ಯ ಸ್ಥಿರವಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD