ಸುರತ್ಕಲ್ ಫಾಝಿಲ್ ಹತ್ಯೆ ಪ್ರಕರಣದ ಆರೋಪಿ, ರೌಡಿ ಶೀಟರ್ ಸುಹಾಸ್ ಶೆಟ್ಟಿಯ ಬರ್ಬರ ಹತ್ಯೆ?!

01/05/2025
ಮಂಗಳೂರು: ಸುರತ್ಕಲ್ ನ ಮಹಮ್ಮದ್ ಫಾಝಿಲ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ, ರೌಡಿ ಶೀಟರ್ ಸುಹಾಸ್ ಶೆಟ್ಟಿಯನ್ನು ದುಷ್ಕರ್ಮಿಗಳು ಸಾರ್ವಜನಿಕರ ಎದುರೇ ತಲವಾರಿನಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ನಡೆಸಿರುವ ಘಟನೆ ಬಜ್ಪೆಯ ಕಿನ್ನಿಪದವು ಹಳೆ ವಿಮಾನ ನಿಲ್ದಾಣದ ರಸ್ತೆಯಲ್ಲಿ ನಡೆದಿದೆ.
ವರದಿಗಳ ಪ್ರಕಾರ ಕಿನ್ನಿಪದವು ಪೇಟೆಯಲ್ಲಿ ಮೀನಿನ ಪಿಕಪ್ ಮತ್ತು ಸುಹಾಸ್ ಶೆಟ್ಟಿಯ ಕಾರಿನ ನಡುವೆ ಅಪಘಾತ ಸಂಭವಿಸಿದೆ. ಈ ವೇಳೆ ಕಾರು ಸಮೀಪದ ಅಂಗಡಿಗೆ ನುಗ್ಗಿತ್ತು. ಬಳಿಕ ಮಾತಿನ ಚಕಮಕಿ ನಡೆದು ಹೊಡೆದಾಟ ಆರಂಭಗೊಂಡಿದ್ದು, ದುಷ್ಕರ್ಮಿಗಳು ಸುಭಾಷ್ ಶೆಟ್ಟಿಯನ್ನು ತಲವಾರಿನಿಂದ ಕೊಚ್ಚಿ ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ತಿಳಿದು ಬಂದಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: