ಸುಹಾಸ್ ಹತ್ಯೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಲಾಗಿದೆ: ಗೃಹ ಸಚಿವ ಪರಮೇಶ್ವರ್ - Mahanayaka

ಸುಹಾಸ್ ಹತ್ಯೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಲಾಗಿದೆ: ಗೃಹ ಸಚಿವ ಪರಮೇಶ್ವರ್

g parameshwar
02/05/2025


Provided by

ಬೆಂಗಳೂರು: ಸುಹಾಸ್ ಹತ್ಯೆ ಪ್ರಕರಣವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಆರೋಪಿಗಳ ಪತ್ತೆ 4 ತಂಡಗಳನ್ನು ರಚಿಸಲಾಗಿದೆ. ಮಂಗಳೂರಿನಲ್ಲಿ ಭದ್ರತೆ ಹೆಚ್ಚಿಸಲಾಗಿದ್ದು, ಜನತೆ ಶಾಂತಿ ಕಾಪಾಡಬೇಕೆಂದು ಗೃಹ ಸಚಿವ ಪರಮೇಶ್ವರ್ ಅವರು ಶುಕ್ರವಾರ ಮನವಿ ಮಾಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂಗಳೂರಿನಲ್ಲಿ ಗುರುವಾರ ರಾತ್ರಿ 8.30 ಗಂಟೆಗೆ ಈ ಘಟನೆ ನಡೆದಿದೆ. ಸುಹಾಸ್ ಶೆಟ್ಟಿ ಎಂಬ ವ್ಯಕ್ತಿಯನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ಘಟನೆಯನ್ನು ಗಂಭೀರವಾಗಿ ಪರಿಗಣಿಸಲಾಗಿದ್ದು, ಈಗಾಗಲೇ ಎಲ್ಲಾ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು.

ಯಾರು ಈ ಕೆಲಸ ಮಾಡಿದ್ದಾರೆ ಅವರನ್ನು ಯಾವುದೇ ಕಾರಣಕ್ಕೂ ಸುಮ್ಮನೆ ಬಿಡುವುದಿಲ್ಲ. ಮಂಗಳೂರಿನಲ್ಲಿ ನಡೆದ ಎರಡು ಕೊಲೆ ಪ್ರಕರಣಗಳು ದಕ್ಷಿಣ ಕನ್ನಡ ಜಿಲ್ಲೆಯನ್ನು ಬೆಚ್ಚಿ ಬೀಳಿಸಿದೆ. ನಾವು ಯಾವುದೇ ಕಾರಣಕ್ಕೂ ಆರೋಪಿಗಳನ್ನು ಬಿಡುವುದಿಲ್ಲ. ಆರೋಪಿಗಳ ಪತ್ತೆಗೆ ನಾಲ್ಕು ತಂಡಗಳನ್ನು ರಚನೆ ಮಾಡಲಾಗಿದೆ ಎಂದು ತಿಳಿಸಿದರು.

ದಕ್ಷಿಣ ಕನ್ನಡ ಜಿಲ್ಲೆಯ ಜನರು ಶಾಂತಿ ಕಾಪಾಡಬೇಕು. ಸರ್ಕಾರ ನಿಮ್ಮ ಜೊತೆಗಿದೆ. ಪೊಲೀಸ್ ಇಲಾಖೆಯೂ ನಿಮ್ಮ ಜೊತೆಗಿದೆ. ಈಗಾಗಲೇ ಹಿರಿಯ ಅಧಿಕಾರಿಗಳನ್ನು ನಿಯೋಜನೆ ಮಾಡಲಾಗಿದೆ. ಯಾವುದೇ ಅಹಿತಕರ ಘಟನೆ ಆಗಬಾರದು. ಘಟನೆಯ ಬಗ್ಗೆ ವರದಿ ಕೇಳಲಾಗಿದೆ.

ಇಂತಹ ಘಟನೆಗಳನ್ನು ಯಾವ ಕಾರಣಕ್ಕೂ ಬೆಳೆಯುವುದಕ್ಕೆ ಬಿಡುವುದಿಲ್ಲ. ಯಾವುದೇ ರಾಜಕೀಯ ಪಕ್ಷ ಆದರೂ ಆರೋಪಿಗಳನ್ನು ಬಿಡುವುದಿಲ್ಲ. ಯಾವ ಸರ್ಕಾರವೂ ಕೂಡಾ ಕೊಲೆ ಆಗುವುದಕ್ಕೆ ಬಯಸುವುದಿಲ್ಲ. ಕಾನೂನು ಸುವ್ಯವಸ್ಥೆ ಕಾಪಾಡುವುದು ನಮ್ಮ ಜವಾಬ್ದಾರಿ. ಯಾವುದೇ ಇಂತಹ ಘಟನೆಗಳು ಮುಂದೆ ಆಗಲು ಬಿಡುವುದಿಲ್ಲ. ಆರೋಪಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳುತ್ತೇವೆ ಎಂದರು


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ