SSLC ಪರೀಕ್ಷೆ ಫಲಿತಾಂಶ ಪ್ರಕಟ: ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ - Mahanayaka

SSLC ಪರೀಕ್ಷೆ ಫಲಿತಾಂಶ ಪ್ರಕಟ: ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ

sslc
02/05/2025


Provided by

ಬೆಂಗಳೂರು: 2024-2025ನೇ ಸಾಲಿನ SSLC ಪರೀಕ್ಷೆ–1 ಫಲಿತಾಂಶ(SSLC Result) ಪ್ರಕಟವಾಗಿದ್ದು, ಶಿಕ್ಷಣ ಸಚಿವ ಮಧು ಬಂಗಾರಪ್ಪ ಸುದ್ದಿಗೋಷ್ಠಿಯಲ್ಲಿ ಫಲಿತಾಂಶ ಪ್ರಕಟ ಮಾಡಿದರು.

ಈ ಬಾರಿ ಶೇ.66.14ರಷ್ಟು ಅಂದರೆ ಕಳೆದ ವರ್ಷಕ್ಕಿಂತ 8% ಫಲಿತಾಂಶ ಹೆಚ್ಚಾಗಿದೆ. ಈ ಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ ಸ್ಥಾನ ಪಡೆದುಕೊಂಡಿದೆ. ಈ ಬಾರಿ 22 ವಿದ್ಯಾರ್ಥಿಗಳು 625 ಅಂಕಗಳಿಗೆ 625 ಅಂಕ ಪಡೆದುಕೊಂಡಿದ್ದಾರೆ ಎಂದು ಹೇಳಿದ್ದಾರೆ.

ಕಳೆದ ವರ್ಷ ಸ್ವಲ್ಪ ಗೊಂದಲ ಇತ್ತು. ಪರೀಕ್ಷೆಯ ಪಾವಿತ್ರತ್ಯೆ ಕಾಪಾಡಬೇಕು ಅಂತ ವೆಬ್ ಕಾಸ್ಟಿಂಗ್ ಮಾಡಿದ್ದೇವೆ. ಕಳೆದ ವರ್ಷ 53% ಫಲಿತಾಂಶ ಬಂದಿತ್ತು. ನಾವು ಗ್ರೇಸ್ ಮಾರ್ಕ್ಸ್ ಕೊಟ್ಟ ಮೇಲೆ 73% ಗೆ ಬಂತು. ಸಿಎಂ ಸಿದ್ದರಾಮಯ್ಯ ಕೂಡ ಇದರ ಬಗ್ಗೆ ಮಾತನಾಡಿದ್ದರು. ಆದಾದ ಮೇಲೆ ಟಾರ್ಗೆಟ್ ಕೊಟ್ಟರು. ಇಲಾಖೆಯಿಂದ ಒಳ್ಳೆಯ ರಿಸಲ್ಟ್ ಬರುವ ರೀತಿಯಲ್ಲಿ ಮಾಡುವಂತೆ ಹೇಳಿದ್ದರು ಎಂದರು.

ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ(ಶೇ.91.12), ಉಡುಪಿ ಜಿಲ್ಲೆ 2ನೇ ಸ್ಥಾನ(ಶೇ.89.96), ಉತ್ತರ ಕನ್ನಡ ಜಿಲ್ಲೆಗೆ 3ನೇ ಸ್ಥಾನ(ಶೇ.83.19), ಶಿವಮೊಗ್ಗ ಜಿಲ್ಲೆಗೆ 4ನೇ ಸ್ಥಾನ(ಶೇ.82.29), ಕೊಡಗು ಜಿಲ್ಲೆಗೆ 5ನೇ ಸ್ಥಾನ(ಶೇ.82.21), ಕಲಬುರಗಿ ಕೊನೆಯ ಸ್ಥಾನ(ಶೇ42.43) ಪಡೆದುಕೊಂಡಿದೆ.

ಇಂದು ಮಧ್ಯಾಹ್ನ 12.30ರ ನಂತರ ವೆಬ್‌ ಸೈಟ್‌ ನಲ್ಲಿ ಫಲಿತಾಂಶ ಲಭ್ಯವಿದ್ದು, https://karresults.nic.in  ಜಾಲತಾಣದಲ್ಲೂ ಫಲಿತಾಂಶ ವೀಕ್ಷಿಸಬಹುದಾಗಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ