ನೀಟ್ ಪರೀಕ್ಷೆ: ಜನಿವಾರ ತೆಗೆದು ಪರೀಕ್ಷೆ ಬರೆದ ವಿದ್ಯಾರ್ಥಿ! - Mahanayaka

ನೀಟ್ ಪರೀಕ್ಷೆ: ಜನಿವಾರ ತೆಗೆದು ಪರೀಕ್ಷೆ ಬರೆದ ವಿದ್ಯಾರ್ಥಿ!

janivar
04/05/2025


Provided by

ಕಲಬುರಗಿ: ಕಲಬುರಗಿಯ ಸೇಂಟ್ ಮೇರಿ ಶಾಲೆಯಲ್ಲಿ ನಡೆದ ನೀಟ್ ಪರೀಕ್ಷೆ ಬರೆಯಲು ಬಂದ ವಿದ್ಯಾರ್ಥಿಯ ಜನಿವಾರ ತೆಗೆಸಿ ಪರೀಕ್ಷೆ ಬರೆಯಲು ಅವಕಾಶ ನೀಡಲಾಗಿದೆ.

ವಿದ್ಯಾರ್ಥಿ ಶ್ರೀಪಾದ್ ಪಾಟೀಲ್ ಪರೀಕ್ಷಾ ಕೇಂದ್ರದ ಒಳಗೆ ಹೋಗುವಾಗ ಪರೀಕ್ಷಾ ನಿಯಮದಂತೆ ಜನಿವಾರ ತೆಗೆಯುವಂತೆ ಅಧಿಕಾರಿಗಳು ಸೂಚನೆ ನೀಡಿದ್ದಾರೆ. ಸೂಚನೆಯಂತೆ ಶ್ರೀಪಾದ್ ಪಾಟೀಲ್ ಅವರು ಜನಿವಾರ ತೆಗೆದು ಪರೀಕ್ಷಾ ಕೇಂದ್ರಕ್ಕೆ ತೆರಳಿ, ಪರೀಕ್ಷೆ ಬರೆದಿದ್ದಾರೆ.

ಇತ್ತೀಚಿಗೆ ನಡೆದ ಸಿಇಟಿ ಪರೀಕ್ಷೆಗೆ ಬರೆಯಲು ಬಂದ ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಶಿವಮೊಗ್ಗ, ಬೀದರ್ ಮತ್ತು ಧಾರವಾಡ ಪರೀಕ್ಷಾ ಕೇಂದ್ರಗಳಲ್ಲಿ ತೆಗೆಸಲಾಗಿತ್ತು. ಸರ್ಕಾರದ ನಿಯಮವನ್ನು ಅಧಿಕಾರಿಗಳು ಕಟ್ಟುನಿಟ್ಟಾಗಿ ಪಾಲಿಸಿದ್ದಾರೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ