ನಟ ಉಪೇಂದ್ರ ಆರೋಗ್ಯದಲ್ಲಿ ಏರುಪೇರು! - Mahanayaka

ನಟ ಉಪೇಂದ್ರ ಆರೋಗ್ಯದಲ್ಲಿ ಏರುಪೇರು!

upendra
05/05/2025


Provided by

ಸ್ಯಾಂಡಲ್ ವುಡ್ ನ ಹಿರಿಯ ನಟ, ನಿರ್ದೇಶಕ ಉಪೇಂದ್ರ ಅವರು ಅನಾರೋಗ್ಯ ಹಿನ್ನೆಲೆ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಇಂದು ಮಧ್ಯಾಹ್ನ ನಡೆದಿದೆ.

ತೀವ್ರವಾದ ಹೊಟ್ಟೆ ಉರಿಯಿಂದ ಉಪೇಂದ್ರ ಬಳಲಿದ್ದು, ಅವರಿಗೆ ಮನೆಯಲ್ಲೇ ಪ್ರಾಥಮಿಕ ಚಿಕಿತ್ಸೆ ನೀಡಲಾಗಿತ್ತು. ಆದರೂ ಆರೋಗ್ಯ ಸುಧಾರಣೆ ಕಾರಣದ ಹಿನ್ನೆಲೆ ಅವರನ್ನು ತಕ್ಷಣವೇ ಸಮೀಪದ ಸ್ಪರ್ಶ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಉಪೇಂದ್ರ ಚೇತರಿಸಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಈ ರೀತಿಯ ಆರೋಗ್ಯ ಸಮಸ್ಯೆ ಇದೇ ಮೊದಲ ಬಾರಿ ಅಲ್ಲ, ಈ ಹಿಂದೆ ಯುಐ ಸಿನಿಮಾ ಚಿತ್ರೀಕರಣ ವೇಳೆಯಲ್ಲೂ ಉಪೇಂದ್ರ ಅವರಿಗೆ ಇದೇ ಮಾದರಿಯ ಸಮಸ್ಯೆ ಕಂಡು ಬಂದಿತ್ತು.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ