ರೌಡಿಶೀಟರ್ ನ ಬರ್ಬರ ಹತ್ಯೆ: ಮುಖಕ್ಕೆ ಪೆಪ್ಪರ್ ಸ್ಪ್ರೇ ಮಾಡಿ ಬರ್ಬರ ಹತ್ಯೆ - Mahanayaka

ರೌಡಿಶೀಟರ್ ನ ಬರ್ಬರ ಹತ್ಯೆ: ಮುಖಕ್ಕೆ ಪೆಪ್ಪರ್ ಸ್ಪ್ರೇ ಮಾಡಿ ಬರ್ಬರ ಹತ್ಯೆ

santhosh kumar
05/05/2025

ದಾವಣಗೆರೆ: ಹಾಡಹಗಲೇ ರೌಡಿಶೀಟರ್ ಒಬ್ಬನನ್ನು ಸಂತೋಷ್ ಮುಖಕ್ಕೆ ಪೆಪ್ಪರ್ ಸ್ಪ್ರೈ ಮಾಡಿ, ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ದಾವಣಗೆರೆ ನಗರದ ಖಾಸಗಿ ಆಸ್ಪತ್ರೆಯೊಂದರ ಮುಂಭಾಗದಲ್ಲಿ ನಡೆದಿದೆ.

ಸಂತೋಷ್ ಕುಮಾರ್ ಅಲಿಯಾಸ್ ಕಣುಮಾ ಹತ್ಯೆಗೀಡಾದ ರೌಡಿಶೀಟರ್ ಆಗಿದ್ದಾನೆ. ಈತ ರಿಯಲ್ ಎಸ್ಟೇಟ್ ಸೆಟಲ್ಮೆಂಟ್ ಮಾಡಿಕೊಂಡಿದ್ದ ಎಂದು ತಿಳಿದು ಬಂದಿದೆ.

ಆಟೋದಲ್ಲಿ ಬಂದ ನಾಲ್ಕೈದು ಜನ ದುಷ್ಕರ್ಮಿಗಳು ಸಂತೋಷ್ ಮುಖಕ್ಕೆ ಪೆಪ್ಪರ್ ಸ್ಪ್ರೈ ಮಾಡಿ, ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿದ್ದಾರೆ.


Provided by

ಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ, ದಾವಣಗೆರೆ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲು ಮಾಡಿಕೊಂಡು ಪರಿಶೀಲನೆ ನಡೆಸಿದ್ದಾರೆ. ಆರೋಪಿಗಳ ಪತ್ತೆಗೆ ಶೋಧ ಆರಂಭಿಸಿದ್ದಾರೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ