ದಾಂಪತ್ಯ ಜೀವನಕ್ಕೆ ಕಾಲಿಟ್ಟ ಚೈತ್ರಾ ಕುಂದಾಪುರ - Mahanayaka

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಚೈತ್ರಾ ಕುಂದಾಪುರ

Chaithra Kundapura
09/05/2025


Provided by

ಬಿಗ್ ಬಾಸ್ ಖ್ಯಾತಿಯ ಚೈತ್ರಾ ಕುಂದಾಪುರ ಅವರು ಇಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. 12 ವರ್ಷಗಳ ಪ್ರೀತಿಯ ನಂತರ ಪರಸ್ಪರ ಎರಡೂ ಕುಟುಂಬಗಳ ಒಪ್ಪಿಗೆಯಂತೆ ಉಡುಪಿಯ ಹಿರಿಯಡ್ಕದ ಶ್ರೀಕಾಂತ್ ಕಶ್ಯಪ್ ಜೊತೆಗೆ ಚೈತ್ರಾ ಕುಂದಾಪುರ ಹಸೆಮಣೆಯೇರಿದ್ದಾರೆ.

ಕುಟುಂಬಕ್ಕೆ ಆಪ್ತರಾದ 100 ಜನರಿಗೆ ಮಾತ್ರವೇ ಮದುವೆ ಆಹ್ವಾನ ನೀಡಲಾಗಿತ್ತು. ವೈದಿಕ ಶಾಸ್ತ್ರದಂತೆ ಮದುವೆ ಕಾರ್ಯಕ್ರಮ ನಡೆಯಿತು. ಬಿಗ್ ಬಾಸ್ ಸ್ಪರ್ಧಿಗಳಾದ ರಜತ್ ಹಾಗೂ ಗೋಲ್ಡ್ ಸುರೇಶ್ ಮದುವೆಯಲ್ಲಿ ಭಾಗಿಯಾಗಿ ನವದಂಪತಿಗೆ ಶುಭ ಹಾರೈಸಿದರು.

ಕಾಲೇಜಿನಲ್ಲಿ ಓದುತ್ತಿದ್ದ ವೇಳೆ ಶ್ರೀಕಾಂತ್ ಕಶ್ಯಪ್ ಹಾಗೂ ಚೈತ್ರಾ ನಡುವೆ ಪರಿಚಯವಾಗಿತ್ತು. ಶ್ರೀಕಾಂತ್ ಆ್ಯನಿಮೇಷನ್ ಕೋರ್ಸ್ ಮಾಡಿದ್ದು, ಸುದ್ದಿವಾಹಿನಿವೊಂದರಲ್ಲಿ ಚೈತ್ರಾ ಜೊತೆ ಕೆಲಸ ಮಾಡಿದ್ದರು. ಇದೀಗ ಜ್ಯೋತಿಷ್ಯ, ವಾಸ್ತು, ಪೌರೋಹಿತ್ಯದ ಕೆಲಸ ಮಾಡುತ್ತಿದ್ದಾರೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

 

ಇತ್ತೀಚಿನ ಸುದ್ದಿ