ರಾಮಸೇನೆ ಮುಖಂಡ ಪ್ರಸಾದ್ ಅತ್ತಾವರಗೆ ಲಂಚ ನೀಡಿದ ಪ್ರಾಧ್ಯಾಪಕ ಅಮಾನತು! - Mahanayaka

ರಾಮಸೇನೆ ಮುಖಂಡ ಪ್ರಸಾದ್ ಅತ್ತಾವರಗೆ ಲಂಚ ನೀಡಿದ ಪ್ರಾಧ್ಯಾಪಕ ಅಮಾನತು!

prasad attawar
10/04/2021


Provided by

ಮಂಗಳೂರು: ಕುಲಪತಿ ಹುದ್ದೆ ಪಡೆಯುವ ಉದ್ದೇಶದಿಂದ ರಾಮಸೇನೆ ಮುಖಂಡ ಪ್ರಸಾದ್ ಅತ್ತಾವರ ಅವರಿಗೆ 17.50 ಲಕ್ಷ ರೂಪಾಯಿ ನೀಡಿದ್ದ ಪ್ರಾಧ್ಯಾಪಕನನ್ನು ಅಮಾನತು ಮಾಡಲಾಗಿದೆ.

ಮಂಗಳೂರು ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಜೈಶಂಕರ್ ಅಮಾನತುಗೊಂಡವರಾಗಿದ್ದಾರೆ. ಲಂಚ ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ ಮಂಗಳೂರು ವಿವಿ ಕುಲಪತಿ ಡಾ.ಪಿ.ಎಸ್. ಯಡಪಡಿತ್ತಾಯ ಅಧ್ಯಕ್ಷತೆಯಲ್ಲಿ ಶುಕ್ರವಾರ ನಡೆದ ಸಿಂಡಿಕೇಟ್ ವಿಶೇಷ ಸಭೆಯಲ್ಲಿ ಜೈಶಂಕರ್ ಅವರನ್ನು ಅಮಾನತು ಮಾಡುವ ನಿರ್ಧಾರ ಕೈಗೊಳ್ಳಲಾಗಿದೆ ಎಂದು ವರದಿಯಾಗಿದೆ.

ಸೂಕ್ಷ್ಮಣು ಜೀವ ವಿಜ್ಞಾನ ವಿಭಾಗದ ಪ್ರಾಧ್ಯಾಪಕರಾದ ಡಾ.ಎಂ. ಜೈಶಂಕರ್ ಅವರಿಗೆ ಕುಲಪತಿ ಹುದ್ದೆ ನೀಡುತ್ತೇನೆ ಎಂದು ರಾಮಸೇನೆ ಮುಖಂಡ ಪ್ರಸಾದ್ ಅತ್ತಾವರ ನಾಮ ಹಾಕಿದ್ದರು. ಪ್ರಕರಣದ ಬಗ್ಗೆ ನಿವೃತ್ತ ಜಿಲ್ಲಾ ನ್ಯಾಯಾಧೀಶರಿಂದ ತನಿಖೆ ನಡೆಸಲು ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಹೇಳಲಾಗಿದೆ.

ಇತ್ತೀಚಿನ ಸುದ್ದಿ