ಪಾಕಿಸ್ತಾನದಿಂದ ಶೆಲ್ ದಾಳಿ: ಸರ್ಕಾರಿ ಅಧಿಕಾರಿ ಸಹಿತ ಐವರು ಸಾವು, ಹಲವರಿಗೆ ಗಾಯ - Mahanayaka

ಪಾಕಿಸ್ತಾನದಿಂದ ಶೆಲ್ ದಾಳಿ: ಸರ್ಕಾರಿ ಅಧಿಕಾರಿ ಸಹಿತ ಐವರು ಸಾವು, ಹಲವರಿಗೆ ಗಾಯ

Raj Kumar Tappa
10/05/2025


Provided by

ಶ್ರೀನಗರ: ರಾಜೌರಿ, ಪೂಂಚ್ ಮತ್ತು ಜಮ್ಮು ಜಿಲ್ಲೆಗಳಲ್ಲಿ ಶನಿವಾರ ಮುಂಜಾನೆ ಪಾಕಿಸ್ತಾನ ನಡೆಸಿದ ಭಾರೀ ಶೆಲ್ ದಾಳಿಯಲ್ಲಿ ಹಿರಿಯ ಸರ್ಕಾರಿ ಅಧಿಕಾರಿಯೊಬ್ಬರು ಸೇರಿದಂತೆ ಐದು ಜನರು ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ.

ಜಮ್ಮು ಮತ್ತು ಕಾಶ್ಮೀರದ ರಾಜೌರಿಯಲ್ಲಿ ಪಾಕಿಸ್ತಾನಿ ಪಡೆಗಳು ನಡೆಸಿದ ಶೆಲ್ ದಾಳಿಯಲ್ಲಿ ಜಮ್ಮು ಮತ್ತು ಕಾಶ್ಮೀರದ ಅಧಿಕಾರಿ ಮತ್ತು ಹೆಚ್ಚುವರಿ ಜಿಲ್ಲಾ ಅಭಿವೃದ್ಧಿ ಆಯುಕ್ತ ರಾಜೌರಿ ರಾಜ್ ಕುಮಾರ್ ಥಾಪ್ಪ ಸೇರಿ ಐವರು ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.

ಉತ್ತರ ಕಾಶ್ಮೀರದ ಉರಿಯಿಂದ ಜಮ್ಮು ಪ್ರದೇಶದ ರಾಜೌರಿ ಮತ್ತು ಪೂಂಚ್ ವರೆಗಿನ ನಿಯಂತ್ರಣ ರೇಖೆಯ ಉದ್ದಕ್ಕೂ ಗಡಿ ಪ್ರದೇಶಗಳಲ್ಲಿ ರಾತ್ರಿಯಿಡೀ ಪಾಕಿಸ್ತಾನಿ ಪಡೆಗಳು ಮಾರ್ಟರ್ ಮತ್ತು ಫಿರಂಗಿ ಶೆಲ್ ಗಳನ್ನು ಹಾರಿಸಿವೆ. ಹೆಚ್ಚುವರಿ ಜಿಲ್ಲಾ ಅಭಿವೃದ್ಧಿ ಆಯುಕ್ತ ರಾಜೌರಿ ಆಗಿದ್ದ ಉನ್ನತ ಅಧಿಕಾರಿ ರಾಜ್ ಕುಮಾರ್ ಥಾಪ್ಪ ಪಾಕಿಸ್ತಾನಿ ಪಡೆಗಳ ಶೆಲ್ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ. ಶೆಲ್ ಅವರ ಮನೆಗೆ ಬಡಿದ ನಂತರ ಅವರಿಗೆ ಗಂಭೀರ ಗಾಯಗಳಾಗಿದ್ದವು. ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ ಅವರು ಸಾವನ್ನಪ್ಪಿದ್ದಾರೆ.

ಜಮ್ಮು ಮತ್ತು ಕಾಶ್ಮೀರದಲ್ಲಿ ಪಾಕಿಸ್ತಾನಿ ಶೆಲ್ ದಾಳಿಯಲ್ಲಿ ಸಾವನ್ನಪ್ಪಿದವರ ಸಂಖ್ಯೆ 17 ಕ್ಕೆ ಏರಿದೆ. ರಾಜೌರಿ, ಪೂಂಚ್ ಮತ್ತು ಉರಿಯಲ್ಲಿ ಅನೇಕ ವಸತಿ ಮನೆಗಳು ಶೆಲ್ ದಾಳಿಯಲ್ಲಿ ಹಾನಿಗೊಳಗಾದವು. ಪಾಕಿಸ್ತಾನದಲ್ಲಿನ ಭಯೋತ್ಪಾದಕರ ನೆಲೆಗಳನ್ನು ಗುರಿಯಾಗಿಸಿಕೊಂಡು ನಾಶಮಾಡಲು ಭಾರತವು ಆಪರೇಷನ್ ಸಿಂದೂರ್ ಪ್ರಾರಂಭಿಸಿದ ನಂತರ ಪಾಕಿಸ್ತಾನಿ ಪಡೆಗಳು ಜಮ್ಮು ಮತ್ತು ಕಾಶ್ಮೀರದ ಎಲ್ಒಸಿ ಮತ್ತು ಅಂತರರಾಷ್ಟ್ರೀಯ ಗಡಿಯಲ್ಲಿನ ಗಡಿ ಪ್ರದೇಶಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುತ್ತಿವೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

 

ಇತ್ತೀಚಿನ ಸುದ್ದಿ