ಕೋಮುದ್ವೇಷ ಭಾಷಣ ಆರೋಪ: ಭರತ್ ಕುಮ್ಡೇಲು ವಿರುದ್ಧ ಪ್ರಕರಣ ದಾಖಲು

ಪುತ್ತೂರು: ಕೋಮುದ್ವೇಷದ ಭಾಷಣ ಮಾಡಿ ಸಾರ್ವಜನಿಕ ಶಾಂತಿ ಕದಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಭರತ್ ಕುಮ್ಡೇಲು ವಿರುದ್ಧ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ನಗರ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.
ಪುತ್ತೂರಿನ ಬೈಪಾಸ್ ರಸ್ತೆ ಬಳಿಯ ಜೈನ ಭವನದಲ್ಲಿ ರೌಡಿಶೀಟರ್ ಸುಹಾಸ್ ಶೆಟ್ಟಿಗೆ ನುಡಿನಮನ ಕಾರ್ಯಕ್ರಮವನ್ನು ಗುರುವಾರ ಸಂಜೆ ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳ ಆಯೋಜಿಸಿತ್ತು. ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಕುಮ್ಡೇಲು, ಕೋಮುಸಾಮರಸ್ಯಕ್ಕೆ ಧಕ್ಕೆ ತರುವಂತಹ ಭಾಷಣ ಮಾಡಿ ಸಾರ್ವಜನಿಕ ನೆಮ್ಮದಿಗೆ ಭಂಗ ತಂದಿರುವ ಆರೋಪ ಕೇಳಿ ಬಂದಿದೆ.
ಈ ಹಿನ್ನೆಲೆಯಲ್ಲಿ ಪುತ್ತೂರು ಪೊಲೀಸರು ಸ್ವಯಂ ಪ್ರೇರಿತವಾಗಿ ದೂರು ದಾಖಲಿಸಿಕೊಂಡಿದ್ದು. ಅ ಕ್ರ 35/2025 ಕಲಂ –196,353(2) BNS 2023ರಂತೆ ಪ್ರಕರಣ ದಾಖಲಿಸಿ ತನಿಖೆ ನಡೆಸಲಾಗುತ್ತಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD