ಚಾರ್ ​ಮಿನಾರ್ ಬಳಿ ಭಾರೀ ಬೆಂಕಿ ಅವಘಡ: ಇಬ್ಬರು ಮಕ್ಕಳ ಸಹಿತ 17 ಮಂದಿ ಸಾವು - Mahanayaka
10:42 PM Friday 12 - December 2025

ಚಾರ್ ​ಮಿನಾರ್ ಬಳಿ ಭಾರೀ ಬೆಂಕಿ ಅವಘಡ: ಇಬ್ಬರು ಮಕ್ಕಳ ಸಹಿತ 17 ಮಂದಿ ಸಾವು

charminar
18/05/2025

ಹೈದರಾಬಾದ್: ಹೈದರಾಬಾದ್‌ ನ ಚಾರ್​ಮಿನಾರ್ ಬಳಿಯ ಗುಲ್ಜಾರ್ ಹೌಸ್‌ ಸಮೀಪದದ ಕಟ್ಟಡವೊಂದರಲ್ಲಿ ಭಾನುವಾರ ಬೆಳಗ್ಗೆ ಭಾರಿ ಅಗ್ನಿ ಅವಘಡ ಸಂಭವಿಸಿದೆ.

ಈ ಬೆಂಕಿ ಅವಘಡದಲ್ಲಿ  ಇಬ್ಬರು ಮಕ್ಕಳ ಸಹಿತ 17 ಮಂದಿ ದಾರುಣವಾಗಿ ಸಾವನ್ನಪ್ಪಿದ್ದಾರೆ. ಬೆಂಕಿ ನಿಯಂತ್ರಿಸಲು ಸ್ಥಳಕ್ಕೆ ಒಟ್ಟು 11 ಅಗ್ನಿಶಾಮಕ ವಾಹನಗಳು ದೌಡಾಯಿಸಿ, ಕಾರ್ಯಾಚರಣೆ ನಡೆಸಿದ್ದಾರೆ.

ರಕ್ಷಣಾ ಸಿಬ್ಬಂದಿ ಒಬ್ಬ ಮಹಿಳೆ ಸೇರಿದಂತೆ ಹಲವರನ್ನು ರಕ್ಷಿಸಿದ್ದಾರೆ. ಆದರೆ 17 ಜನರು ಬೆಂಕಿಗೆ ಸಿಲುಕಿ ಪ್ರಾಣ ಕಳೆದುಕೊಂಡಿದ್ದಾರೆ. ಅಲ್ಲದೆ, ಗಾಯಗೊಂಡವರನ್ನು ಚಿಕಿತ್ಸೆಗಾಗಿ ಉಸ್ಮಾನಿಯಾ, ಹೈದರ್‌ ಗುಡ ಮತ್ತು ಡಿಆರ್‌ಡಿಒ ಆಸ್ಪತ್ರೆಗಳಿಗೆ ರವಾನಿಸಲಾಗಿದೆ.

ಬೆಂಕಿ ಅವಘಡಕ್ಕೆ ನಿಖರ ಕಾರಣ ಏನೆಂಬುದು ತಿಳಿದುಬಂದಿಲ್ಲ. ಶಾರ್ಟ್ ಸರ್ಕ್ಯೂಟ್ ಕಾರಣವಿರಬಹುದು ಎಂಬ ಶಂಕೆ ಇದೆ. ಈ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ