ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ಆರೋಪಿ ಚೊಟ್ಟೆ ನೌಷಾದ್ ಮೇಲೆ ಸಹಕೈದಿಗಳಿಂದ ದಾಳಿ

ಮಂಗಳೂರು: ರೌಡಿಶೀಟರ್ ಸುಹಾಸ್ ಶೆಟ್ಟಿ(Suhas Shetty) ಹತ್ಯೆ ಪ್ರಕರಣದ ಆರೋಪಿ ನೌಷಾದ್ ಯಾನೆ ಚೊಟ್ಟೆ ನೌಷಾದ್ ಮೇಲೆ ಸಹ ಕೈದಿಗಳು ದಾಳಿ ನಡೆಸಿರುವ ಘಟನೆ ಮಂಗಳೂರು ಸೆಂಟ್ರಲ್ ಜೈಲ್(Mangalore Central Jail) ನಲ್ಲಿ ನಡೆದಿದೆ.
ನೌಷಾದ್ ಮೇಲೆ ಬಿ ಬ್ಯಾರಕ್ ನ ಹಲವು ಸಹ ಕೈದಿಗಳಿಂದ ಕಲ್ಲು ಮತ್ತು ಸಿಕ್ಕ ಸಿಕ್ಕ ವಸ್ತುಗಳಿಂದ ದಾಳಿ ನಡೆಸಲಾಗಿದೆ ಎಂದು ಹೇಳಲಾಗಿದೆ. ಇಂದು ನೌಷಾದ್ ನ ಪೊಲೀಸ್ ಕಸ್ಟಡಿ ಅಂತ್ಯವಾಗಿದೆ. ಹೀಗಾಗಿ ಆತನನ್ನು ಮೈಸೂರು ಕಾರಾಗೃಹಕ್ಕೆ ಶಿಫ್ಟ್ ಮಾಡಲಾಗುತ್ತಿತ್ತು. ಈ ವೇಳೆ ನೌಷಾದ್ ಮೇಲೆ ದಾಳಿ ನಡೆಸಲಾಗಿದೆ ಎಂದು ತಿಳಿದು ಬಂದಿದೆ.
ಆರೋಪಿ ನೌಷದ್ ಅಲಿಯಾಸ್ ವಾಮಂಜೂರು ನೌಷದ್ ಅಲಿಯಾಸ್ ಚೊಟ್ಟೆ ನೌಷದ್, ಸುಹಾಸ್ ಶೆಟ್ಟಿಯ ಕೊಲೆಗೆ ಉಳಿದ ಆರೋಪಿಗಳ ಜೊತೆ ಸಂಚು ರೂಪಿಸಿ ಕೊಲೆ ಕೃತ್ಯದಲ್ಲಿ ಭಾಗಿಯಾಗಿದ್ದ.
ಈತನ ವಿರುದ್ಧ ಸುರತ್ಕಲ್, ಬಜ್ಪೆ, ಮೂಡಬಿದ್ರಿ, ಮಂಗಳೂರು ಉತ್ತರ ಮತ್ತು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಗಳಲ್ಲಿ ಕೊಲೆ, ಕೊಲೆ ಯತ್ನ, ದರೋಡೆಗೆ ಸಂಚು ಸೇರಿದಂತೆ ಒಟ್ಟು 6 ಪ್ರಕರಣಗಳು ದಾಖಲಾಗಿವೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD