ಬಿಡದಿ ಬಾಲಕಿಯ ಅನುಮಾನಾಸ್ಪದ ಸಾವು ಪ್ರಕರಣ: ಪೊಲೀಸರಿಗೆ ಸಿಕ್ಕಿತು ಮಹತ್ವದ ಸಾಕ್ಷಿ? - Mahanayaka

ಬಿಡದಿ ಬಾಲಕಿಯ ಅನುಮಾನಾಸ್ಪದ ಸಾವು ಪ್ರಕರಣ: ಪೊಲೀಸರಿಗೆ ಸಿಕ್ಕಿತು ಮಹತ್ವದ ಸಾಕ್ಷಿ?

khushi
19/05/2025


Provided by

ರಾಮನಗರ: ಬಿಡದಿ ಹೋಬಳಿಯ ಭದ್ರಾಪುರ ಹಕ್ಕಿಪಿಕ್ಕಿ ಕಾಲೋನಿಯ ಬಾಲಕಿ ಖುಷಿ(15) ಅನುಮಾನಾಸ್ಪದ ಸಾವಿನ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ಅನುಮಾನಗಳು ವ್ಯಕ್ತವಾಗಿವೆ. ಈ ಪ್ರಕರಣದಲ್ಲಿ ಯಾರನ್ನೋ ರಕ್ಷಣೆ ಮಾಡಲಾಗುತ್ತಿದೆ ಎಂಬ ಹಲವಾರು ವದಂತಿಗಳು ಹರಿದಾಡಿವೆ. ಈ ನಡುವೆ    ರಾಮನಗರ ಪೊಲೀಸ್ ವರಿಷ್ಠಾಧಿಕಾರಿ ಶ್ರೀನಿವಾಸ್ ಗೌಡ  ಇಂದು ಈ ಪ್ರಕರಣ ಸಂಬಂಧ ಮತ್ತೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದು, ಹಲವಾರು ವಿಚಾರಗಳನ್ನು ಹಂಚಿಕೊಂಡಿದ್ದಾರೆ.

ಬಾಲಕಿ ಸಾವಿನ ಬಗ್ಗೆ ಎಲ್ಲಾ ಆಯಾಮಗಳಲ್ಲೂ ತನಿಖೆ ನಡೆಸಲಾಗಿದೆ. ಹೆಡ್ ಇಂಜೂರಿಯಿಂದ ಮೃತಪಟ್ಟಿರುವುದಾಗಿ ವರದಿಯಲ್ಲಿ ಉಲ್ಲೇಖವಾಗಿದೆ. FSL, ಮರಣೋತ್ತರ ಪರೀಕ್ಷಾ ವರದಿಯಲ್ಲಿ ಉಲ್ಲೇಖಿಸಲಾಗಿದೆ  ಎಂದು ತಿಳಿಸಿದ್ದಾರೆ.

ರೈಲ್ವೆ ಇಲಾಖೆಯ ಸಿಸಿ ಕ್ಯಾಮರಾದ ವಿಡಿಯೋ ಪಡೆದುಕೊಂಡಿದ್ದೇವೆ. ಎರಡು ಸಿಸಿ ಕ್ಯಾಮರಾದಲ್ಲಿ ಬಾಲಕಿಯ ಚಲನವಲನ ಕಂಡು ಬಂದಿದೆ. ಎಲ್ಲಾ ಆಯಾಮಗಳಲ್ಲೂ ತನಿಖೆ ಮಾಡಿದಾಗ ರೈಲ್ವೆ ಅಪಘಾತ ಎಂಬುದು ಕಂಡುಬಂದಿದೆ. 6 ಗಂಟೆ 7 ನಿಮಿಷದಿಂದ 6 ಗಂಟೆ 8 ನಿಮಿಷದ ಮಧ್ಯೆ ಘಟನೆ ನಡೆದಿದೆ ಎಂದು ತಿಳಿಸಿದ್ದಾರೆ.

ಇನ್ನೂ  ರೈಲ್ವೆ ಇಲಾಖೆಯ ಸಿಸಿ ಕ್ಯಾಮರಾದ ಕಂಪ್ಲೀಟ್ ಬ್ಯಾಕಪ್‌ ಸಹ ಪಡೆದಿದ್ದೇವೆ. ರೈಲಿನಲ್ಲೂ ಪರಿಶೀಲನೆ ಮಾಡಿ ಸ್ಯಾಂಪಲ್ಸ್‌ ಸಂಗ್ರಹಿಸಿದ್ದೇವೆ, FSLಗೆ ಕಳಿಸುತ್ತೇವೆ ಎಂದು ಅವರು ತಿಳಿಸಿದರು.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ