ಗೃಹ ಸಚಿವ ಡಾ.ಜಿ.ಪರಮೇಶ್ವರ್ ಗೆ ಇಡಿ ಶಾಕ್!  - Mahanayaka

ಗೃಹ ಸಚಿವ ಡಾ.ಜಿ.ಪರಮೇಶ್ವರ್ ಗೆ ಇಡಿ ಶಾಕ್! 

siddhartha college tumakuru
21/05/2025

ತುಮಕೂರು: ಗೃಹ ಸಚಿವ ಡಾ.ಜಿ.ಪರಮೇಶ್ವರ್ ಒಡೆತನದ ತುಮಕೂರಿನ ಸಿದ್ದಾರ್ಥ ಕಾಲೇಜಿನ ಮೇಲೆ ಇಡಿ ಅಧಿಕಾರಿಗಳು ದಾಳಿ  ನಡೆಸಿದ್ದಾರೆ.

ಬೆಳ್ಳಂ ಬೆಳಗ್ಗೆಯೇ ಜಾರಿ ನಿರ್ದೇಶನಾಲಯದ ಅಧಿಕಾರಿಗಳು 5 ಕಾರುಗಳಲ್ಲಿ ಆಗಮಿಸಿದ್ದು, ಕಾಲೇಜಿನ​​ ಕಚೇರಿಗೆ ತೆರಳಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.

ತುಮಕೂರಿನಲ್ಲಿರುವ ಎಸ್ ಎಸ್ ಐಟಿ ಕಾಲೇಜು ಹಾಗೂ ತುಮಕೂರಿನ ಹೆಗ್ಗೆರೆ ಬಳಿಯಿರುವ ಸಿದ್ಧಾರ್ಥ ಮೆಡಿಕಲ್ ಕಾಲೇಜಿನಲ್ಲಿ ಇಡಿ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.

ಬೆಳಗ್ಗೆಯೇ 5 ಇನ್ನೋವ ಕಾರುಗಳಲ್ಲಿ ಸಿದ್ದಾರ್ಥ ಕಾಲೇಜಿಗೆ ಬಂದಿಳಿದ ಇಡಿ ಅಧಿಕಾರಿಗಳು , ನೇರವಾಗಿ ಪ್ರಿನ್ಸಿಪಾಲ್ ಕಚೇರಿಗೆ ತೆರಳಿ ದಾಖಲೆಗಳ ಪರಿಶೀಲನೆ ನಡೆಸಿದರು.

ಇನ್ನೂ ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಮ್ಮ ಸಿದ್ದಾರ್ಥ ವಿದ್ಯಾಸಂಸ್ಥೆ ಮೇಲಿ ಇಡಿ ದಾಳಿ ವಿಚಾರಕ್ಕೆ ಪ್ರತಿಕ್ರಿಯಿಸಲು ನಿರಾಕರಿಸಿದ್ದಾರೆ. ಮಾಧ್ಯಮಗಳಿಗೆ ಯಾವುದೇ ಪ್ರತಿಕ್ರಿಯೆ ನೀಡದೆ, ಡಾ.ಜಿ‌.ಪರಮೇಶ್ವರ್ ಅವರು ಪತ್ನಿ ಕನ್ನಿಕಾ ಜೊತೆ ತೆರಳಿದರು.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ