ಪ್ರೀತಿಸಿದ ಯುವಕನೊಂದಿಗೆ ಮನೆ ಬಿಟ್ಟು ಹೋದ ಯುವತಿ: ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣು - Mahanayaka

ಪ್ರೀತಿಸಿದ ಯುವಕನೊಂದಿಗೆ ಮನೆ ಬಿಟ್ಟು ಹೋದ ಯುವತಿ: ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣು

drown water
24/05/2025


Provided by

ಮೈಸೂರು: ಪ್ರೀತಿಸಿದ ಯುವಕನೊಂದಿಗೆ ಮಗಳು ಮನೆ ಬಿಟ್ಟು ಹೋದಳು ಎಂಬ ಕಾರಣಕ್ಕೆ  ಒಂದೇ ಕುಟುಂಬದ ಮೂವರು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರು  ಜಿಲ್ಲೆ ಹೆಚ್.ಡಿ.ಕೋಟೆ  ತಾಲೂಕಿನ ಬಂದನೂರಿನಲ್ಲಿ ನಡೆದಿದೆ.

ಮಹದೇವಸ್ವಾಮಿ, ಪತ್ನಿ ಮಂಜುಳಾ ಹಾಗೂ ಮಗಳು ಹರ್ಷಿತಾ ಆತ್ಮಹತ್ಯೆಗೆ ಶರಣಾದವರಾಗಿದ್ದಾರೆ. ಪ್ರೇಮ ವಿವಾಹವನ್ನು ಸಹಿಸದೇ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ.

ಮಹದೇವಸ್ವಾಮಿಯ ಹಿರಿಯ ಪುತ್ರಿ ಅರ್ಪಿತಾ ತಾನು ಪ್ರೀತಿಸಿದ ಯುವಕನೊಂದಿಗೆ ಮನೆ ಬಿಟ್ಟು ಹೋಗಿದ್ದಳು. ಇದರಿಂದ ಮನನೊಂದು ಕುಟುಂಬ ಆತ್ಮಹತ್ಯೆಗೆ ಶರಣಾಗಿದೆ ಎಂದು ಹೇಳಲಾಗಿದೆ.

ಬೂದನೂರು ಕೆರೆಯ ಏರಿ ಮೇಲೆ ಬೈಕ್ ಹಾಗೂ ಮೂವರ ಚಪ್ಪಲಿ ಪತ್ತೆಯಾಗಿತ್ತು. ಹುಡುಕಾಟ ನಡೆಸಿದ ವೇಳೆ ಮೂವರ ಮೃತದೇಹ ಪತ್ತೆಯಾಗಿದೆ. ಹೆಚ್‌.ಡಿ.ಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ