ಟ್ರಾಫಿಕ್ ಪೊಲೀಸರ ಎಡವಟ್ಟಿ 3 ವರ್ಷದ ಮಗು ಬಲಿ ಪ್ರಕರಣ: ಮೂವರು ಎಎಸ್ ಐಗಳ ಅಮಾನತು - Mahanayaka

ಟ್ರಾಫಿಕ್ ಪೊಲೀಸರ ಎಡವಟ್ಟಿ 3 ವರ್ಷದ ಮಗು ಬಲಿ ಪ್ರಕರಣ: ಮೂವರು ಎಎಸ್ ಐಗಳ ಅಮಾನತು

mandya
27/05/2025

ಮಂಡ್ಯ: ಟ್ರಾಫಿಕ್ ಪೊಲೀಸರ ಎಡವಟ್ಟಿನಿಂದ 3 ವರ್ಷದ ಮಗು ಮೃತಪಟ್ಟ ದಾರುಣ ಘಟನೆ ಮಂಡ್ಯದಲ್ಲಿ ಸೋಮವಾರ ನಡೆದಿದೆ.

ಮಂಡ್ಯದ ನಂದ ಸರ್ಕಲ್ ಬಳಿ ಟ್ರಾಫಿಕ್ ಪೊಲೀಸರು ಹೆಲ್ಮೆಟ್ ತಪಾಸಣೆ ನಡೆಸುತ್ತಿದ್ದ ಈ ವೇಳೆ ದುರ್ಘಟನೆ ಸಂಭವಿಸಿದೆ. ದಂಪತಿ ಮತ್ತು ಮಗು ಪ್ರಯಾಣಿಸುತ್ತಿದ್ದ ಬೈಕ್ ಅನ್ನು ಸವಾರ ಹೆಲ್ಮೆಟ್ ಧರಿಸಿಲ್ಲ ಎಂದು ಪೊಲೀಸರು ತಪಾಸಣೆಗಾಗಿ ತಡೆದಿದ್ದು, ಈ ವೇಳೆ ಪೋಷಕರು ಮಗುವಿಗೆ ನಾಯಿ ಕಚ್ಚಿದ್ದು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದೇವೆ ಎಂದಾಗ ಪೊಲೀಸರು ಬಿಟ್ಟಿದ್ದಾರೆ.

ಆದರೆ ಬೈಕ್ ಸವಾರ ಕೊಂಚ ಮುಂದಕ್ಕೆ ಹೋಗುತ್ತಲೇ ಅದೇ ರಸ್ತೆಯಲ್ಲಿ ಸಾಗುತ್ತಿದ್ದ ಮತ್ತೊಂದು ವಾಹನ ಅವರಿಗೆ ಟಚ್ ಆಗಿದೆ. ಈ ವೇಳೆ ಬೈಕ್ ಸವಾರ ನಿಯಂತ್ರಣ ತಪ್ಪಿ ಕೆಳಗೆ ಬಿದ್ದಿದ್ದು, ಮಗು ಕೂಡ ಕೆಳಗೆ ರಸ್ತೆ ಮೇಲೆ ಬಿದ್ದಿದೆ. ಇದೇ ಸಂದರ್ಭದಲ್ಲೇ ಹಿಂಬದಿಯಿಂದ ಬಂದ ಟೆಂಪೋ ಮಗು ಮೇಲೆ ಹರಿದಿದ್ದು, ಮಗು ಸ್ಥಳದಲ್ಲೇ ಸಾವನ್ನಪ್ಪಿದೆ ಎಂದು ಹೇಳಲಾಗಿದೆ.

ಮಗುವಿನ ಸಾವಿಗೆ ಪೊಲೀಸರ ಕಾರಣ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸುತ್ತಿದ್ದು, ಮಗುವಿನ ಮೃತದೇಹವನ್ನು ರಸ್ತೆ ಮಧ್ಯೆ ಇಟ್ಟು ಪೊಷಕರೊಂದಿಗೆ ಪ್ರತಿಭಟನೆ ನಡೆಸಿದ್ದಾರೆ.

ಮೂವರು ಅಧಿಕಾರಿಗಳ ಅಮಾನತು

ಇನ್ನು ಈ ಪ್ರಕರಣ ತೀವ್ರ ಸ್ವರೂಪ ಪಡೆಯುತ್ತಿದ್ದಂತೆಯೇ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಎಎಸ್​ ಐಗಳನ್ನು ಅಮಾನತು ಮಾಡಲಾಗಿದೆ. ಮಗು ಸಾವಿಗೆ ಮಂಡ್ಯ ಟ್ರಾಫಿಕ್ ಪೊಲೀಸರು ಕಾರಣವೆಂದು ಕುಟುಂಬಸ್ಥರು ಹೆದ್ದಾರಿಯಲ್ಲಿ ಪ್ರತಿಭಟನೆ ಕುಳಿತ್ತಿದ್ದು, ಈ ಪ್ರಕರಣ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆಯೇ ಎಚ್ಚೆತ್ತುಕೊಂಡು ಮಂಡ್ಯ ಎಸ್.​ಪಿ.ಮಲ್ಲಿಕಾರ್ಜುನ ಬಾಲದಂಡಿ, ಹೆಲ್ಮೆಟ್​ ತಪಾಸಣೆ ಮಾಡುತ್ತಿದ್ದ ಮೂವರು ಎಎಸ್​ ಐಗಳನ್ನು ಅಮಾನತು ಮಾಡಿದ್ದಾರೆ.

ಎಸ್.​ಪಿ.ಮಲ್ಲಿಕಾರ್ಜುನ ಬಾಲದಂಡಿ ಅವರು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ. ASIಗಳಾದ ಜಯರಾಮ್​, ನಾಗರಾಜ್​, ಗುರುದೇವ್ ಅಮಾನತುಗೊಂಡವರಾಗಿದ್ದಾರೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ