ಚಾರ್ಮಾಡಿ ಜಲಪಾತಗಳ ಬಳಿ ಪ್ರವಾಸಿಗರ ಮೋಜು–ಮಸ್ತಿಗೆ ಫುಲ್ ಸ್ಟಾಪ್

ಚಿಕ್ಕಮಗಳೂರು: ಚಾರ್ಮಾಡಿ ಜಲಪಾತಗಳ ಬಳಿ ಪ್ರವಾಸಿಗರ ಮೋಜು–ಮಸ್ತಿಗೆ ಫುಲ್ ಸ್ಟಾಪ್ ಹಾಕಲಾಗಿದೆ. ಚಾರ್ಮಾಡಿ ಘಾಟಿಯಲ್ಲಿ ಪೊಲೀಸರ ನಿಯೋಜನೆ ಮಾಡಲಾಗಿದ್ದು, ಚಾರ್ಮಾಡಿ ಘಾಟಿ ಜಲಪಾತಗಳ ಬಳಿ ಪೊಲೀಸರು ಅಲರ್ಟ್ ಆಗಿದ್ದಾರೆ.
ಬಂಡೆ ಹತ್ತುವ ಜಾಗಕ್ಕೆ ಬ್ಯಾರಿಕೇಡ್ ಹಾಕಿ ಬಂದ್ ಮಾಡಲಾಗಿದೆ. ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟ್ ಬಳಿ ಜಲಪಾತಗಳ ಸ್ಥಳದಲ್ಲೇ ಪೊಲೀಸರು ಮೊಕ್ಕಾಂ ಹೂಡಲಿದ್ದಾರೆ.
ಬಂಡೆಗಳ ಬಳಿ ಪೊಲೀಸರ ನಿರಂತರ ಗಸ್ತು ನಡೆಸಲಿದ್ದಾರೆ. ಬಂಡೆ ಹತ್ತಿದ್ದು ಕಂಡು ಬಂದರೆ ನಿರ್ದಾಕ್ಷ್ಯ ಕ್ರಮದ ಎಚ್ಚರಿಕೆ ನೀಡಿದ್ದಾರೆ.
ಪ್ರವಾಸಿಗರ ಹುಚ್ಚಾಟ:
ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟ್ ಪ್ರದೇಶದ ಜಲಪಾತಗಳ ಬಳಿ ಪ್ರವಾಸಿಗರ ಹುಚ್ಚಾಟ ನಡೆಸಿದ್ದರು. ನಿರಂತರವಾಗಿ ನೀರು ಹರಿಯುತ್ತಿರುವ ಕಾರಣ ಬಂಡೆಗಳು ತೀವ್ರವಾಗಿ ಜಾರುತ್ತಿದ್ದು, ಅಪಾಯದ ಎಚ್ಚರಿಕೆ ನೀಡಿದರೂ ಪ್ರವಾಸಿಗರು ಜೀವದ ಹಂಗು ಮರೆತು ಜಾರುವ ಬಂಡೆಗಳ ಮೇಲೆ ಹತ್ತಿ ಸೆಲ್ಫಿ, ವಿಡಿಯೋ ತೆಗೆದುಕೊಳ್ಳುತ್ತಿದ್ದರು. ಈ ಹಿಂದೆ ಇದೇ ಪ್ರದೇಶದಲ್ಲಿ ಬಿದ್ದು ಕೈ–ಕಾಲು ಮುರಿದುಕೊಂಡವರು, ಜೀವ ಕಳೆದುಕೊಂಡವರೂ ಇದ್ದಾರೆ. ಹೆಚ್ಚಿನ ಮಳೆಯ ಪರಿಣಾಮವಾಗಿ ಜಲಪಾತಗಳು ಉಬ್ಬಿ ಹರಿಯುತ್ತಿದ್ದು, ಜಾರುವಿಕೆ ಹೆಚ್ಚು ಸಾಧ್ಯವಾಗುತ್ತಿದೆ. ಪೊಲೀಸರು ಸ್ಥಳದಲ್ಲಿ ಗಸ್ತು ತಿರುಗುತ್ತಿದ್ದು, ಪ್ರವಾಸಿಗರಿಗೆ ಎಚ್ಚರಿಕೆ ನೀಡುತ್ತಿದ್ದಾರೆ. ಆದರೂ ಕೆಲವರು ಪೊಲೀಸರ ಕಣ್ತಪ್ಪಿಸಿ ಅಪಾಯಕರ ಸ್ಥಳಗಳಿಗೆ ಪ್ರವೇಶಿಸುತ್ತಿದ್ದರು. ಪೊಲೀಸರು ಒಂದು ಕಡೆ ಎಚ್ಚರಿಕೆಯಿಂದ ನೋಡುತ್ತಿದ್ದರೆ, ಪ್ರವಾಸಿಗರು ಮತ್ತೊಂದು ಕಡೆ ಬಂಡೆಗಳ ಮೇಲೆ ಹತ್ತುತ್ತಿದ್ದರು. ಇದೀಗ ಬಣಕಲ್ ಪೊಲೀಸರಿಂದ ಚಾರ್ಮಾಡಿ ಘಾಟಿಯಲ್ಲಿ ನಿರಂತರ ಗಸ್ತು ಆರಂಭಿಸಿದ್ದಾರೆ. ಹುಚ್ಚಾಟ ಮೆರೆಯುವ ಪ್ರವಾಸಿಗರ ಆಟಕ್ಕೆ ಕೊನೆಗೂ ನಿಯಂತ್ರಣ ಹೇರಲಾಗಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: