ತಪ್ಪು ಮಾಡಿಲ್ಲ, ಕ್ಷಮೆ ಕೇಳಲ್ಲ:  ಪಟ್ಟು ಹಿಡಿದ ಕಮಲ್ ಹಾಸನ್ - Mahanayaka

ತಪ್ಪು ಮಾಡಿಲ್ಲ, ಕ್ಷಮೆ ಕೇಳಲ್ಲ:  ಪಟ್ಟು ಹಿಡಿದ ಕಮಲ್ ಹಾಸನ್

kamal hassan
30/05/2025


Provided by

ಬೆಂಗಳೂರು:   ನಾನು ತಪ್ಪು ಮಾಡಿಲ್ಲ, ಹಾಗಾಗಿ ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ ಎಂದು ಕಮಲ್ ಹಾಸನ್ ಮತ್ತೆ ತಮ್ಮ ಮೊಂಡುವಾದವನ್ನು ಮುಂದಿರಿಸಿದ್ದು, ಕನ್ನಡದ ಬಗ್ಗೆ ವಿವಾದಿತ ಹೇಳಿಕೆ ನೀಡಿದ ನಂತರ ವ್ಯಾಪಕ ವಿರೋಧ ವ್ಯಕ್ತವಾದರೂ ಕಮಲ್ ಹಾಸನ್  ತನ್ನ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ.

ಥಗ್ ಲೈಫ್ ಚಿತ್ರ ಪ್ರಮೋಷನ್ ವೇಳೆ ತಮಿಳಿನಿಂದ ಕನ್ನಡ ಹುಟ್ಟಿತು ಎಂದು ಹೇಳಿಕೆ ನೀಡಿದ್ದ ಕಮಲ್ ಹಾಸನ್, ಕನ್ನಡಿಗರ ಆಕ್ರೋಶಕ್ಕೆ ಗುರಿಯಾಗಿದ್ದರು.  ಕನ್ನಡ ಬಗ್ಗೆ ನೀಡಿರುವ ಹೇಳಿಕೆಗೆ ಕ್ಷಮೆಯಾಚಿಸಬೇಕು ಎನ್ನುವ ಒತ್ತಾಯದ ನಡುವೆಯೇ ಕಮಲ್ ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ.

‘ನನ್ನಿಂದ ತಪ್ಪು ಆಗಿದ್ದರೆ ಮಾತ್ರ ಕ್ಷಮೆಯಾಚಿಸುವೆ, ನನ್ನಿಂದ ತಪ್ಪು ಆಗಿಲ್ಲ, ಹಾಗಾಗಿ ನಾನು ಕ್ಷಮೆ ಕೇಳಲ್ಲ, ಯಾವುದೇ ಬೆದರಿಕೆ, ಎಚ್ಚರಿಕೆಗೆ ನಾನು ಹೆದರುವುದಿಲ್ಲ, ನಾನು ಕಾನೂನು ಮತ್ತು  ನ್ಯಾಯದ ಮೇಲೆ ನಂಬಿಕೆ ಇಟ್ಟಿದ್ದೇನೆ ಎಂದು ಕಮಲ್ ಹಾಸನ್ ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ.

ಕಮಲ್ ಹಾಸನ್ ಸಿನಿಮಾ ‘ಥಗ್ ಲೈಫ್’ನ ಕರ್ನಾಟಕದ ವಿತರಣೆ ಹಕ್ಕನ್ನು ಖರೀದಿಸಿರುವ ವೆಂಕಟೇಶ್ ಅವರನ್ನು ನಿನ್ನೆ ಫಿಲಂ ಚೇಂಬರ್ ​ಗೆ ಕರೆಸಿ ಸಭೆ ನಡೆಸಲಾಗಿದ್ದು, ಕಮಲ್ ಹಾಸನ್ ಬಳಿ ಕ್ಷಮೆ ಕೇಳಿಸುವ ಜವಾಬ್ದಾರಿಯನ್ನು ವೆಂಕಟೇಶ್ ಹೆಗಲಿಗೆ ಹಾಕಲಾಗಿತ್ತು. ವೆಂಕಟೇಶ್ ಸಹ, ತಾವು ಪರಿಸ್ಥಿತಿಯ ಗಂಭೀರತೆಯನ್ನು ಕಮಲ್ ಅವರಿಗೆ ಮನವರಿಕೆ ಮಾಡಿ ಅಗತ್ಯ ಹೆಜ್ಜೆ ಇಡುವಂತೆ ಮನವಿ ಮಾಡುತ್ತೇವೆ ಎಂದಿದ್ದರು. ಅದಾದ 24 ಗಂಟೆಯೊಳಗೆ ಕಮಲ್ ಹಾಸನ್, ತಾವು ಕ್ಷಮೆ ಕೇಳುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ