RCB ವಿಜಯೋತ್ಸವದ ವೇಳೆ ಬೈಕ್ ಗಳ ಮುಖಾಮುಖಿ ಡಿಕ್ಕಿ: ಯುವಕ ಸಾವು - Mahanayaka

RCB ವಿಜಯೋತ್ಸವದ ವೇಳೆ ಬೈಕ್ ಗಳ ಮುಖಾಮುಖಿ ಡಿಕ್ಕಿ: ಯುವಕ ಸಾವು

bike accident
04/06/2025


Provided by

ಶಿವಮೊಗ್ಗ: ಐಪಿಎಲ್ ಫೈನಲ್ ನಲ್ಲಿ ಆರ್‌ಸಿಬಿ ತಂಡ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಮಂಗಳವಾರ ತಡರಾತ್ರಿ ಸಂಭ್ರಮಾಚರಣೆ ವೇಳೆ ಎರಡು ಬೈಕ್ ಗಳ ನಡುವೆ ನಡೆದ ಮುಖಾಮುಖಿ ಡಿಕ್ಕಿಯಲ್ಲಿ ಯುವಕ ಸಾವಿಗೀಡಾಗಿದ್ದಾನೆ.

ವೆಂಕಟೇಶ ನಗರದ ನಿವಾಸಿ ಅಭಿನಂದನ್ (21) ಮೃತ ಯುವಕ. ಉಷಾ ನರ್ಸಿಂಗ್ ಹೋಂ ಸರ್ಕಲ್ ಬಳಿಯ ರವೀಂದ್ರ ನಗರ ಗಣಪತಿ ದೇವಸ್ಥಾನದ ಮುಂದೆ ಅಪಘಾತ ಸಂಭವಿಸಿದೆ.

ಆರ್ ಸಿಬಿ ಗೆಲುವಿನ ಸಂಭ್ರಮಾಚರಣೆಗೆ ಯುವಕರು ಬೈಕ್ ಗಳಲ್ಲಿ ಹೊರಟಿದ್ದರು. ಈ ಸಂದರ್ಭ ಎರಡು ಬೈಕುಗಳು ಮುಖಾಮುಖಿ ಡಿಕ್ಕಿಯಾಗಿವೆ. ತೀವ್ರ ಗಾಯಗೊಂಡಿದ್ದ ಅಭಿನಂದನ್ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ. ಘಟನೆಯಲ್ಲಿ ಇನ್ನೊಂದು ಬೈಕ್ ನಲ್ಲಿದ್ದ ಮಿಥುನ್ ಹಾಗೂ ಅಭಿಷೇಕ್ ಗಾಯಗೊಂಡಿದ್ದಾರೆ.

ಮಂಗಳವಾರ ರಾತ್ರಿ RCB ಟೀಂ ಗೆಲುವು ಸಾಧಿಸುತ್ತಿದ್ದಂತೆ ಯುವಕರು, ಕ್ರಿಕೆಟ್ ಪ್ರೇಮಿಗಳು ಉಷಾ ನರ್ಸಿಂಗ್ ಹೋಂ ಬಳಿ ಸಂಭ್ರಮಾಚರಣೆ ನಡೆಸುತ್ತಿದ್ದರು. ನೂರು ಅಡಿ ರಸ್ತೆ ರವೀಂದ್ರ ನಗರದ ಕಡೆ ರಸ್ತೆಯಲ್ಲಿ ಕ್ರಿಕೆಟ್ ಅಭಿಮಾನಿಗಳು ಕುಣಿಯುತ್ತಿದ್ದರು. ಈ ವೇಳೆ ಮಿಥುನ್ ಹಾಗೂ ಅಭಿಷೇಕ್ ತಮ್ಮ ಬೈಕ್ ನಲ್ಲಿ ಉಷಾ ನರ್ಸಿಂಗ್ ಹೋಂ ಕಡೆಯಿಂದ ವಿನೋಬನಗರ ಕಡೆಗೆ ಹೋಗುತ್ತಿದ್ದಾಗ, ಅದೇ ಕಡೆಯಿಂದ ಅಭಿಷೇಕ್ ಬರುತ್ತಿದ್ದು ಬೈಕ್ ಗಳು ಮುಖಾಮುಖಿ ಡಿಕ್ಕಿಯಾಗಿವೆ. ಈ ವೇಳೆ ಅಭಿಷೇಕ್ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ