ನಾಳೆಯಿಂದ ತೀವ್ರಗೊಳ್ಳಲಿದೆ ಸಾರಿಗೆ ನೌಕರರ ಮುಷ್ಕರ! - Mahanayaka
12:41 PM Saturday 18 - October 2025

ನಾಳೆಯಿಂದ ತೀವ್ರಗೊಳ್ಳಲಿದೆ ಸಾರಿಗೆ ನೌಕರರ ಮುಷ್ಕರ!

ksrtc
11/04/2021

ಬೆಂಗಳೂರು: 6ನೇ ವೇತನ ಆಯೋಗ ಜಾರಿಗೆ ಸಾರಿಗೆ ನೌಕರರು ನಡೆಸುತ್ತಿರುವ ಮುಷ್ಕರ ಇಂದು 5ನೇ ದಿನಕ್ಕೆ ಕಾಲಿಟ್ಟಿದ್ದು, ಈ ನಡುವೆ ನಾಳೆಯಿಂದ ರಾಜ್ಯಾದ್ಯಂತ ಮುಷ್ಕರ ಇನ್ನಷ್ಟು ತೀವ್ರಗೊಳಿಸುವುದಾಗಿ ಕೋಡಿಹಳ್ಳಿ ಚಂದ್ರಶೇಖರ್ ಘೋಷಿಸಿದ್ದಾರೆ.


Provided by

ಈ ಸಂಬಂಧ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಸರ್ಕಾರವು ಮುಷ್ಕರ ಹತ್ತಿಕ್ಕಲು ಪ್ರಯತ್ನಿಸುತ್ತಿದ್ದು, ಮುಷ್ಕರದಲ್ಲಿ ಪಾಲ್ಗೊಂಡ ನೌಕರರನ್ನು ವರ್ಗಾವಣೆ ಮಾಡಿ, ತಕ್ಷಣ ಕರ್ತವ್ಯಕ್ಕೆ ಹಾಜರಾಗುವಂತೆ ದಬ್ಬಾಳಿಕೆ ಹೇರುತ್ತಿದೆ. ಸರ್ಕಾರದ ಕ್ರಮದ ವಿರುದ್ಧ ನಾಳೆ ರಾಜ್ಯಾದ್ಯಂತ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಸಾರಿಗೆ ನೌಕರರು ತಟ್ಟೆ, ಲೋಟ ಬಡಿದು ವಿಭಿನ್ನ ಪ್ರತಿಭಟನೆ ನಡೆಸುವುದಾಗಿ ತಿಳಿಸಿದ್ದಾರೆ.

ನಾಳೆ ಬೆಳಿಗ್ಗೆ 11 ಗಂಟೆಯಿಂದಲೇ ಚಳುವಳಿ ಆರಂಭಿಸುತ್ತೇವೆ. ಕೊರೊನಾ ನಿಯಮಗಳನ್ನು ಪಾಲಿಸಿಯೇ ವಿಭಿನ್ನ ಮುಷ್ಕರದಲ್ಲಿ ಭಾಗವಹಿಸುತ್ತೇವೆ. ಬೆಂಗಳೂರು ಸೇರಿದಂತೆ ರಾಜ್ಯದ ಎಲ್ಲಾ ಭಾಗಗಳಲ್ಲೂ ಪ್ರತಿಭಟನೆ ನಡೆಯಲಿದೆ ಎಂದು ಅವರು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ