ಬೆಂಗಳೂರು ನಗರ ಪೊಲೀಸ್ ಆಯುಕ್ತ ದಯಾನಂದ್ ಅಮಾನತು: ಹೊಸ ಪೊಲೀಸ್ ಕಮಿಷನರ್ ನೇಮಕ - Mahanayaka

ಬೆಂಗಳೂರು ನಗರ ಪೊಲೀಸ್ ಆಯುಕ್ತ ದಯಾನಂದ್ ಅಮಾನತು: ಹೊಸ ಪೊಲೀಸ್ ಕಮಿಷನರ್ ನೇಮಕ

bangalore police
06/06/2025


Provided by

ಬೆಂಗಳೂರು: ರಾಯಲ್ ಚಾಲೆಂಜರ್ಸ್​ ಬೆಂಗಳೂರು(RCB) ಐಪಿಎಲ್ ಚಾಂಪಿಯನ್ ಆಗಿರುವ ಹಿನ್ನೆಲೆ  ಆಯೋಜಿಸಿದ್ದ ವಿಜಯೋತ್ಸವದ ವೇಳೆ ಚಿನ್ನಾಸ್ವಾಮಿ ಸ್ಟೇಡಿಯಂ ಬಳಿ ಸಂಭವಿಸಿದ್ದ ಕಾಲ್ತುಳಿತದಲ್ಲಿ  11 ಜನರು ಸಾವನ್ನಪ್ಪಿದ್ದಾರೆ. ಈ ಪ್ರಕರಣ ಸಂಬಂಧ ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೇರಿದಂತೆ  ಹಲವು ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ.

ಅಮಾನತು ಆದೇಶದ ಕೆಲವೇ ಕ್ಷಣಗಳಲ್ಲಿ ರಾಜ್ಯ ಸರ್ಕಾರ ಬೆಂಗಳೂರು ನಗರ ಪೊಲೀಸ್ ಕಮಿಷನರ್ ಆಗಿ  ಸೀಮಂತ್​ ಕುಮಾರ್ ಸಿಂಗ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ.

1996 ಬ್ಯಾಚ್ ಐಪಿಎಸ್ ಅಧಿಕಾರಿಯಾಗಿದ್ದ ಬಿಹಾರ ಮೂಲದ ಸೀಮಂತ್ ಕುಮಾರ್, ಈ ಹಿಂದೆ ಬೆಂಗಳೂರು ಪೂರ್ವ ವಲಯ ಹೆಚ್ಚುವರಿ ಆಯುಕ್ತರಾಗಿ, ಎಸಿಬಿಯಲ್ಲಿ ಎಡಿಜಿಪಿಯಾಗಿ, ಕೆಎಸ್ಆರ್ ಪಿ ಎಡಿಜಿಪಿಯಾಗಿ ಕಾರ್ಯ ನಿರ್ವಹಿಸಿದ್ದರು. ಸದ್ಯ ಬಿಎಂಟಿಎಫ್ (ಬೆಂಗಳೂರು ಮಹಾನಗರ ಕಾರ್ಯಪಡೆ) ಎಡಿಜಿಪಿಯಾಗಿದ್ದ ಸೀಮಂತ್ ಕುಮಾರ್ ಸಿಂಗ್ ಇದೀಗ ಬೆಂಗಳೂರಿಗೆ 39ನೇ ನೂತನ ಕಮಿಷನರ್ ಆಗಿ ನೇಮಕಗೊಂಡಿದ್ದಾರೆ.

ಸೀಮಂತ್‌ ಕುಮಾರ್‌ ಸಿಂಗ್‌ ಮಂಗಳೂರು ನಗರಕ್ಕೆ ಕಮಿಷನರೇಟ್ ಬಂದ ಬಳಿಕ ಮೊದಲ ಪೊಲೀಸ್ ಕಮಿಷನರ್ ಆಗಿದ್ದರು. 2000ದಿಂದ 2004ರವರೆಗೆ ದಕ್ಷಿಣ ಕನ್ನಡ ಜಿಲ್ಲಾ ಎಸ್‌ ಪಿಯಾಗಿಯೂ ಅವರು ಸೇವೆ ಸಲ್ಲಿಸಿದ್ದರು.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ