ಬೆಂಗಳೂರಿನಲ್ಲಿ ಕಾಲ್ತುಳಿತ ಪ್ರಕರಣ: ಮೂವರು ಆಯೋಜಕರ ಸಹಿತ ನಾಲ್ವರ ಬಂಧನ

ಬೆಂಗಳೂರು: ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಾಲ್ತುಳಿತದಿಂದ 11 ಆರ್ಸಿಬಿ (RCB) ಅಭಿಮಾನಿಗಳ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆಯೋಜಕರು ಸೇರಿದಂತೆ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ.
ಕಬ್ಬನ್ ಪಾರ್ಕ್ ಠಾಣೆ ಪೊಲೀಸರು ಮತ್ತು ಸಿಸಿಬಿ ಜಂಟಿ ಕಾರ್ಯಾಚರಣೆ ನಡೆಸಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿಯಿರುವ ಕೆಂಪೇಗೌಡ ಏರ್ಪೋರ್ಟ್ನಲ್ಲಿ ಮೂವರು ಆಯೋಜಕರು ಸೇರಿ ನಾಲ್ವರನ್ನು ಬಂಧಿಸಿದ್ದಾರೆ.
ಮುಂಬೈಗೆ ತೆರಳುತ್ತಿದ್ದ ಆರ್ ಸಿಬಿ ಮಾರ್ಕೆಟಿಂಗ್ ಮುಖಸ್ಥ ನಿಖಿಲ್ ಸೋಸಲೆ, ಡಿಎನ್ ಎ ಮ್ಯಾನೇಜ್ ಮೆಂಟ್ ಸಿಬ್ಬಂದಿ ಸುನೀಲ್ ಮ್ಯಾಥ್ಯೂ, ಕಿರಣ್ ಮತ್ತು ಸುಮಂತ್ ಬಂಧಿತರು.
ಸದ್ಯ ನಾಲ್ವರು ಆರೋಪಿಗಳನ್ನು ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಗೆ ಕರೆತರಲಾಗಿದ್ದು, ಶೇಷಾದ್ರಿಪುರಂ ಎಸಿಪಿ ಪ್ರಕಾಶ್ ವಿಚಾರಣೆ ಮಾಡಿದ್ದಾರೆ.
ಆರ್ ಸಿಬಿ ಮಾರ್ಕೆಟಿಂಗ್ ಮುಖಸ್ಥ ನಿಖಿಲ್ ಸೋಸಲೆ ಬೆಂಗಳೂರಿನ ವಿಧಾನ ಸೌಧದಿಂದ ಚಿನ್ನಸ್ವಾಮಿ ಸ್ಟೇಡಿಯಂವರೆಗೂ ವಿಕ್ಟರಿ ಪರೇಡ್ ಅಂತ ಪೊಲೀಸರು ಅನುಮತಿ ನಿರಾಕರಿಸಿದ ನಂತರವು ಸೊಶೀಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿ ನಂತರ ಡಿಲೀಟ್ ಮಾಡಿದ್ದರು. ಸ್ಟೇಡಿಯಂನಲ್ಲಿ ಸೆಲೆಬ್ರೇಷನ್ ಗೆ ಉಚಿತ ಟಿಕೆಟ್ ಅಂತ ಘೋಷಿಸಿರುವುದು.
ಗೇಟ್ 9 ಮತ್ತು 10ರ ಬಳಿ ಮಧ್ಯಾಹ್ನ 1 ಗಂಟೆಗೆ ಟಿಕೆಟ್ ಸಿಗತ್ತೆ ಎಂದಿದ್ದು, 1 ಗಂಟೆ ಆದರೂ ಟಿಕೆಟ್ ವಿತರಣೆ ಆಗದಿರುವುದು. ಬಳಿಕ ಮಧ್ಯಾಹ್ನ 3 ಗಂಟೆಗೆ ಸ್ಟೇಡಿಯಂಗೆ ಅಭಿಮಾನಿಗಳ ಪ್ರವೇಶ ಅಂತ ರಾಯಲ್ ಚಾಲೆಂಜರ್ಸ್ ಬೆಂಗಳೂರು ಅಧಿಕೃತ ಖಾತೆಯಲ್ಲಿ ಪೋಸ್ಟ್ ಮಾಡಿದ್ದರು. ಲಕ್ಷಾಂತರ ಜನ ಸೇರಲಿಕ್ಕೆ ಕಾರಣವಾಗಿದ್ದೇ ಸೋಶಿಯಲ್ ಮೀಡಿಯಾದಲ್ಲಿ ಹಾಕಲಾಗಿದ್ದ ಪೋಸ್ಟ್ ಎನ್ನಲಾಗಿದೆ.
ನಿಖಿಲ್ ಸೂಚನೆಯಂತೆ ಡಿಎನ್ಎ ಮ್ಯಾನೇಜ್ ಮೆಂಟ್ ಕಂಪನಿ ವರ್ತಿಸಿದೆ. 22 ಗೇಟ್ಗಳ ಪೈಕಿ ಏಕಕಾಲಕ್ಕೆ ಕೇವಲ 19, 20 ಮತ್ತು 22ನೇ ಮೂರು ಗೇಟ್ ಮಾತ್ರ ಒಪನ್ ಮಾಡಿಸಲಾಗಿತ್ತು ಎಂದು ತಿಳಿದು ಬಂದಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: