ಕ್ಷೀಣಿಸಿದ ಮಳೆ: ಮತ್ತೆ ಮಳೆ ಆರಂಭ ಯಾವಾಗ?: ಹವಾಮಾನ ವರದಿ - Mahanayaka
12:37 AM Wednesday 20 - August 2025

ಕ್ಷೀಣಿಸಿದ ಮಳೆ: ಮತ್ತೆ ಮಳೆ ಆರಂಭ ಯಾವಾಗ?: ಹವಾಮಾನ ವರದಿ

rain
06/06/2025


Provided by

ಬೆಂಗಳೂರು: ಕರ್ನಾಟಕದಾದ್ಯಂತ ಒಣಹವೆ ಇರಲಿದ್ದು, ಕೆಲವೇ ಕೆಲವು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರ್ನಾಟಕದಲ್ಲಿ ಮುಂಗಾರು ಪೂರ್ವ ಮಳೆ ಚೆನ್ನಾಗಿ ಬಂದಿದ್ದರೂ, ಮುಂಗಾರು ಆರಂಭವಾಗುತ್ತಿದ್ದಂತೆ ಮಳೆ ಕ್ಷೀಣಿಸಿದೆ. ಮೇ ಅಂತ್ಯದಲ್ಲಿ ಎಲ್ಲೆಡೆ ಭಾರಿ ಮಳೆಯಾಗಿ ಅವಾಂತರ ಸೃಷ್ಟಿಸಿತ್ತು.

ಜೂನ್ 10ರ ಬಳಿಕ ಮಳೆ ಚುರುಕುಗೊಳ್ಳಲಿದೆ.  ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಕದ್ರಾ, ಕ್ಯಾಸಲ್​ರಾಕ್, ಮಂಕಿ, ಆಗುಂಬೆ, ಯಲ್ಲಾಪುರ, ಅಫ್ಝಲ್ ​ಪುರ, ಶಿಗ್ಗಾಂವ್, ಕಲಘಟಗಿ, ಲೋಂಡಾ, ಚಿಕ್ಕೋಡಿ, ಹೊನ್ನಾವರ, ಕುಮಟಾ, ಜೋಯಿಡಾ, ಗೇರುಸೊಪ್ಪ, ಮಂಗಳೂರು, ಪಣಂಬೂರು, ಮುಂಡಗೋಡು, ಮುಲ್ಕಿ, ಕಾರವಾರ, ಕುಂದಾಪುರ, ಅಂಕೋಲಾದಲ್ಲಿ ಮಳೆಯಾಗಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ