ಪತ್ನಿಯ ರುಂಡ ಕತ್ತರಿಸಿ ಪೊಲೀಸ್ ಠಾಣೆಗೆ ಕೊಂಡೊಯ್ದ ಪತಿ! - Mahanayaka

ಪತ್ನಿಯ ರುಂಡ ಕತ್ತರಿಸಿ ಪೊಲೀಸ್ ಠಾಣೆಗೆ ಕೊಂಡೊಯ್ದ ಪತಿ!

anekkal
07/06/2025


Provided by

ಬೆಂಗಳೂರು: ಮಗಳ ಮುಂದೆಯೇ ಪತ್ನಿಯ ತಲೆ ಕಡಿದ ಪತಿ ಬಳಿಕ ಆಕೆಯ ರುಂಡದೊಂದಿಗೆ ಪೊಲೀಸ್ ಠಾಣೆಗೆ ಬಂದು ಶರಣಾಗಿರುವ ಭೀಭತ್ಸ ಘಟನೆ ಶನಿವಾರ ಆನೆಕಲ್ ತಾಲೂಕಿನ ಸೂರ್ಯನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಹೆಬ್ಬಗೋಡಿಯ ಮಾನಸಾ (26) ಕೊಲೆಯಾದ ಮಹಿಳೆಯಾಗಿದ್ದು, ಕಾಚನಾಯಕನಹಳ್ಳಿಯ ಶಂಕರ್ (26) ಹತ್ಯೆ ನಡೆಸಿದ ಆರೋಪಿಯಾಗಿದ್ದಾನೆ. ಇವರಿಬ್ಬರು ಐದು ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದರು.

ಆನೇಕಲ್​ನ ಸೂರ್ಯನಗರ ಪೊಲೀಸ್ ಠಾಣೆ ವ್ಯಾಪ್ತಿಯ ಬಾಡಿಗೆ ಮನೆಯಲ್ಲಿ ವಾಸವಿದ್ದ ಶಂಕರ್ ಬೊಮ್ಮಸಂದ್ರದ ಕಾರ್ಖಾನೆಯೊಂದರಲ್ಲಿ ರಾತ್ರಿ ಪಾಳಿ ಕೆಲಸ ಮಾಡುತ್ತಿದ್ದ. ರಾತ್ರಿ ಪಾಳಿ ಕೆಲಸ ಮುಗಿಸಿ ಮನೆಗೆ ಬರುವ ವೇಳೆ ಪತ್ನಿ ಪ್ರಿಯಕರನ ಜೊತೆಗೆ ಮನೆಯಲ್ಲಿ ಸಿಕ್ಕಿಬಿದ್ದಿದ್ದಾಳೆ. ಈ ವೇಳೆ ಪ್ರಿಯಕರ ಸ್ಥಳದಿಂದ ಪರಾರಿಯಾಗಿದ್ದಾನೆ. ಈ ವೇಳೆ ಕೋಪಗೊಂಡಿದ್ಧ ಶಂಕರ್ ಪತ್ನಿಯ ರುಂಡವನ್ನೇ ಕತ್ತರಿಸಿದ್ದಾನೆ.

ಬಳಿಕ ಕವರ್ ನಲ್ಲಿ ರುಂಡವನ್ನು ತುಂಬಿಸಿಕೊಂಡು ಸೂರ್ಯನಗರ ಪೊಲೀಸ್ ಠಾಣೆಗೆ ಆಗಮಿಸಿ ಶರಣಾಗಿದ್ದಾನೆ. ಸದ್ಯ ಆರೋಪಿಯನ್ನು ಬಂಧಿಸಲಾಗಿದೆ. ಕ ಘಟನಾ ಸ್ಥಳಕ್ಕೆ ಡಿವೈಎಸ್​ ಪಿ ಮೋಹನ್ ಕುಮಾರ್, ಪಿಐ ಸಂದೀಪ್ ಮಹಜನ್ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪರಾರಿಯಾದ ಪ್ರಿಯಕರನಿಗಾಗಿ ಶೋಧ ಕಾರ್ಯ ಮುಂದುವರೆದಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ