ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ NIAಗೆ ವಹಿಸಿ ಆದೇಶ - Mahanayaka
6:22 PM Thursday 11 - December 2025

ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ NIAಗೆ ವಹಿಸಿ ಆದೇಶ

suhas shetty
08/06/2025

ಬೆಂಗಳೂರು: ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣವನ್ನು ರಾಜ್ಯ ಗೃಹಸಚಿವಾಲಯ ರಾಷ್ಟ್ರೀಯ ತನಿಖಾ ದಳ (NIA) ಕ್ಕೆ ವಹಿಸಿ ಆದೇಶ ಹೊರಡಿಸಿದೆ. ಎನ್ ​ಐಎ ಅಧಿಕಾರಿಗಳು ಪ್ರಕರಣದ ತನಿಖೆ ನಡೆಸಲಿದ್ದಾರೆ.

ಸುಹಾಸ್ ಶೆಟ್ಟಿ ಕೊಲೆ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳಕ್ಕೆ ವಹಿಸುವಂತೆ ರಾಜ್ಯ ಬಿಜೆಪಿ ನಿಯೋಗ ರಾಜ್ಯಪಾಲ ಥಾವರ್ ಚಂದ್​ ಗೆಹ್ಲೋಟ್​ ಅವರಿಗೆ ಮನವಿ ಸಲ್ಲಿಸಿತ್ತು.

ಮೇ.01 ದಂದು ರಾತ್ರಿ ಮಂಗಳೂರು ನಗರದ ಬಜ್ಪೆ ಬಳಿ ರೌಡಿಶೀಟರ್ ಸುಹಾಸ್​ ಶೆಟ್ಟಿಯನ್ನು ತಲವಾರಿನಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಪ್ರಕರಣ ಸಂಬಂಧ ಪೊಲೀಸರು ಈವರೆಗೆ 11 ಜನರನ್ನು ಬಂಧಿಸಿದ್ದಾರೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ