ಬಿಎಂಟಿಸಿ ಬಸ್ ಚಾಲಕನಿಗೆ ಚಪ್ಪಲಿಯಿಂದ ಹಲ್ಲೆ ನಡೆಸಿದ ಮಹಿಳೆ! - Mahanayaka

ಬಿಎಂಟಿಸಿ ಬಸ್ ಚಾಲಕನಿಗೆ ಚಪ್ಪಲಿಯಿಂದ ಹಲ್ಲೆ ನಡೆಸಿದ ಮಹಿಳೆ!

bmtc
14/06/2025


Provided by

ಬೆಂಗಳೂರು: ತಾನು ಹೇಳಿದ ಜಾಗದಲ್ಲಿ ಬಸ್ ನಿಲ್ಲಿಸಿಲ್ಲ ಎಂದು ಕೋಪಗೊಂಡ ಮಹಿಳೆಯೊಬ್ಬರು ಬಿಎಂಟಿಸಿ ಬಸ್ ಚಾಲಕರೊಬ್ಬರ ಮೇಲೆ ಚಪ್ಪಲಿಯಿಂದ ಹಲ್ಲೆ ನಡೆಸಿ ಅವಮಾನಿಸಿರುವ ಘಟನೆ ಬೆಂಗಳೂರಿನ ಸರ್ಜಾಪುರ ರಸ್ತೆಯ ಕೈಕೊಂಡರಹಳ್ಳಿಯಲ್ಲಿ ಬಳಿ ನಡೆದಿದೆ.

ಅತಹರ್ ಹುಸೇನ್(42) ಎಂಬವರು ಹಲ್ಲೆಗೊಳಗಾದ ಬಸ್ ಚಾಲಕರಾಗಿದ್ದು, ಕಾವ್ಯಾ(30) ಎಂಬಾಕೆ ಹಲ್ಲೆ ನಡೆಸಿದ ಮಹಿಳೆಯಾಗಿದ್ದಾಳೆ. ಈಕೆ ಸಾಫ್ಟ್‌ವೇರ್ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದಾಳೆ ಎಂದು ತಿಳಿದು ಬಂದಿದೆ.

ಕೈಕೊಂಡರಹಳ್ಳಿ ಬಸ್‌ ನಿಲ್ದಾಣದಲ್ಲಿ ಟಿಕೆಟ್ ತೆಗೆದುಕೊಂಡ ಕಾವ್ಯ, ತನ್ನ ಕಚೇರಿಯ ಮುಂದೆ ಬಸ್ ನಿಲ್ಲಿಸುವಂತೆ ಚಾಲಕನಿಗೆ ಒತ್ತಾಯಿಸಿದ್ದಾಳೆ. ಆದರೆ, ಸಂಚಾರ ದಟ್ಟಣೆ ಮತ್ತು ನಿಯಮಗಳ ಕಾರಣದಿಂದ ಅತಹರ್ ಅವರು ಹೇಳಿದಂತೆ ನಿಲ್ಲಿಸಿಲ್ಲ. ನಂತರ  ಆ ಮಹಿಳೆ ಹೊಟ್ಟೆನೋವಿನಿಂದ ಕಿರುಚಿಕೊಂಡು ಬಸ್ ನಿಲ್ಲಿಸುವಂತೆ ಒತ್ತಾಯಿಸಿದ್ದಾಳೆ. ಇದಕ್ಕೆ ಸ್ಪಂದಿಸಿದ ಚಾಲಕ, ಬಲಕ್ಕೆ ತಿರುವು ತೆಗೆದುಕೊಂಡು ಬಸ್‌ ನಿಲ್ಲಿಸಿದ್ದಾರೆ. ಈ ವೇಳೆ ಕಾವ್ಯ ತನ್ನ ಚಪ್ಪಲಿಯನ್ನು ತೆಗೆದುಕೊಂಡು ಅತಹರ್ ಮೇಲೆ ಹಲ್ಲೆ ನಡೆಸಿದ್ದಾಳೆ ಎಂಬ ಆರೋಪ ಕೇಳಿಬಂದಿದೆ.

ಈ ಘಟನೆಯಿಂದ ಆಘಾತಗೊಂಡ ಚಾಲಕ, ಬೆಳ್ಳಂದೂರು ಪೊಲೀಸ್ ಠಾಣೆಯಲ್ಲಿ ಕಾವ್ಯ ವಿರುದ್ಧ ದೂರು ದಾಖಲಿಸಿದ್ದಾರೆ. ಭಾರತೀಯ ದಂಡ ಸಂಹಿತೆಯ ಸೆಕ್ಷನ್ 121, 131, 132 ಮತ್ತು 352ರ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ