ರಸ್ತೆಗೆ ಬಿದ್ದ ಮರ: ಮುಳ್ಳಯ್ಯನಗಿರಿ , ದತ್ತಪೀಠಕ್ಕೆ ತೆರಳುವ ರಸ್ತೆ ಬಂದ್ - Mahanayaka

ರಸ್ತೆಗೆ ಬಿದ್ದ ಮರ: ಮುಳ್ಳಯ್ಯನಗಿರಿ , ದತ್ತಪೀಠಕ್ಕೆ ತೆರಳುವ ರಸ್ತೆ ಬಂದ್

chikkamagaluru
16/06/2025

ಚಿಕ್ಕಮಗಳೂರು :  ಕಾಫಿನಾಡ ಮಲೆನಾಡು ಭಾಗದಲ್ಲಿ ಗಾಳಿ–ಮಳೆ ಅಬ್ಬರ ಮುಂದುವರೆದಿದೆ. ಬೃಹತ್ ಮರ ರಸ್ತೆಗೆ ಬಿದ್ದು ಸಂಚಾರ ಅಸ್ತವ್ಯಸ್ತವಾಗಿದೆ.


Provided by

ಚಿಕ್ಕಮಗಳೂರು ತಾಲೂಕಿನ ಕೈಮರದ ಬಳಿ ಘಟನೆ ನಡೆದಿದೆ. ಪರಿಣಾಮವಾಗಿ ಮುಳ್ಳಯ್ಯನಗಿರಿ , ದತ್ತಪೀಠಕ್ಕೆ ತೆರಳುವ ರಸ್ತೆ ಬಂದ್  ಆಗಿದೆ.  ಕೈಮರ ಸಮೀಪ ರಸ್ತೆಗುರುಳಿರುವ ಬೃಹತ್ ಗಾತ್ರದ ಮರವನ್ನು  ತೆರವುಗೊಳಿಸಲು ಪೊಲೀಸರು ಹಾಗೂ ಸ್ಥಳೀಯರ ಹರಸಾಹಸ ಪಡುತ್ತಿದ್ದಾರೆ.

ಬೃಹತ್ ಮರ ರಸ್ತೆಗೆ ಬಿದ್ದ ಪರಿಣಾಮ ವಾಹನ ಸಂಚಾರ ಸ್ಥಗಿತವಾಗಿದೆ.  ಸ್ಥಳಕ್ಕೆ ಗ್ರಾಮಾಂತರ ಪೊಲೀಸರ ಭೇಟಿ, ಪರಿಶೀಲನೆ ನಡೆಸಿದ್ದಾರೆ.  ಚಿಕ್ಕಮಗಳೂರು ತಾಲ್ಲೂಕಿನ ಕೈಮರ ಚೆಕ್ ಪೋಸ್ಟ್ ನಲ್ಲಿ ಈ ಘಟನೆ ಸಂಭವಿಸಿದೆ.

ಬುಡಸಮೇತ ರಸ್ತೆಗೆ ಉರುಳಿಬಿದ್ದ ಬೃಹತ್ ಮರ:

ಚಿಕ್ಕಮಗಳೂರು: ಮಲೆನಾಡಲ್ಲಿ ಗಾಳಿ ಮಳೆ ಅಬ್ಬರ ಮುಂದುವರಿದಿದೆ. ಭಾರೀ ಮಳೆಗೆ ಬುಡಸಮೇತ ಬೃಹತ್ ಮರ ರಸ್ತೆಗೆ ಉರುಳಿಬಿದ್ದಿದೆ. ಕೊಪ್ಪ ತಾಲೂಕಿನ ಮೇಗೂರು ಬಳಿ ಈ ಘಟನೆ ನಡೆದಿದೆ.  ಮೇಗೂರಿನಿಂದ ಕೊಗ್ರೆ ಗ್ರಾಮಕ್ಕೆ ಹೋಗುವ ಮಾರ್ಗದಲ್ಲಿ ಈ ಘಟನೆ ನಡೆದಿದ್ದು, ಅದೃಷ್ಟವಶಾತ್ ಯಾವುದೇ ಅನಾಹುತ ಸಂಭವಿಸಿಲ್ಲ,  ಸ್ಥಳಕ್ಕೆ ಜಯಪುರ ಪೊಲೀಸರ ಭೇಟಿ, ಪರಿಶೀಲನೆ ನಡೆಸಿದ್ದಾರೆ. ಸ್ಥಳೀಯರು ಹಾಗೂ ಪೊಲೀಸರಿಂದ ಮರ ತೆರವು ಕಾರ್ಯ ನಡೆಸಿದ್ದಾರೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ