ಟೆಹ್ರಾನ್ ತೊರೆಯಿರಿ: ಇರಾನ್ ಜನತೆಗೆ ಎಚ್ಚರಿಕೆ ನೀಡಿದ ಟ್ರಂಪ್! - Mahanayaka
5:04 AM Saturday 18 - October 2025

ಟೆಹ್ರಾನ್ ತೊರೆಯಿರಿ: ಇರಾನ್ ಜನತೆಗೆ ಎಚ್ಚರಿಕೆ ನೀಡಿದ ಟ್ರಂಪ್!

israel iran war
17/06/2025

ವಾಷಿಂಗ್ಟನ್: ಇರಾನ್ ರಾಜಧಾನಿ ಟೆಹ್ರಾನ್ ನ್ನು ತೊರೆಯುವಂತೆ ಅಲ್ಲಿನ ಜನರಿಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಎಚ್ಚರಿಕೆ ನೀಡಿದ್ದು, ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಟ್ರಂಪ್ ಈ ಬಗ್ಗೆ ಪೋಸ್ಟ್ ಮಾಡಿದ್ದಾರೆ.


Provided by

ಇರಾನ್ ತಾನು ಹೇಳಿದ ಒಪ್ಪಂದಕ್ಕೆ ಸಹಿ ಹಾಕಿಲ್ಲ ಎನ್ನುವ ಕಾರಣಕ್ಕೆ ಇರಾನ್ ಗೆ ಪರೋಕ್ಷವಾಗಿ ಅಮೆರಿಕ ಬೆದರಿಕೆ ಹಾಕಿದೆ ಎಂದು ನಂಬಲಾಗಿದೆ.

“ನಾನು ಸಹಿ ಮಾಡಲು ಹೇಳಿದ ‘ಒಪ್ಪಂದ’ಕ್ಕೆ ಇರಾನ್ ಸಹಿ ಹಾಕಬೇಕಿತ್ತು. ಎಂತಹ ನಾಚಿಕೆಗೇಡಿನ ಸಂಗತಿ ಮತ್ತು ಮಾನವ ಜೀವ ವ್ಯರ್ಥ. ಸರಳವಾಗಿ ಹೇಳುವುದಾದರೆ, ಇರಾನ್ ಪರಮಾಣು ಶಸ್ತ್ರಾಸ್ತ್ರವನ್ನು ಹೊಂದಲು ಸಾಧ್ಯವಿಲ್ಲ. ನಾನು ಅದನ್ನು ಪದೇ ಪದೇ ಹೇಳಿದ್ದೇನೆ! ಎಲ್ಲರೂ ತಕ್ಷಣ ಟೆಹ್ರಾನ್ ಅನ್ನು ಸ್ಥಳಾಂತರಿಸಬೇಕು ಎಂದು ಟ್ರಂಪ್ ಹೇಳಿದ್ದಾರೆ.

ಡೊನಾಲ್ಡ್ ಟ್ರಂಪ್ ಕೆನಡಾದಲ್ಲಿ ನಡೆಯುತ್ತಿರುವ ಜಿ7 ಶೃಂಗಸಭೆಯಲ್ಲಿ ಭಾಗವಹಿಸುತ್ತಿರುವ ಹೊತ್ತಲ್ಲಿ ಈ ಪೋಸ್ಟ್​ ಮಾಡಿದ್ದು, ಇರಾನ್ ಗೆ ಪರೋಕ್ಷವಾಗಿ ದಾಳಿಯ ಎಚ್ಚರಿಕೆ ನೀಡಿದ್ದಾರೆ.

ಭಾರತ—ಪಾಕಿಸ್ತಾನದ ಯುದ್ಧದ ಸಂದರ್ಭದಲ್ಲೂ ಅಮೆರಿಕ ಮೂಗುತೂರಿಸಿತ್ತು, ಇದೀಗ ಇಸ್ರೇಲ್—ಇರಾನ್ ಯುದ್ಧದಲ್ಲೂ ಟ್ರಂಪ್ ತಮ್ಮ ಛಾಳಿ ಮುಂದುವರಿಸಿದ್ದಾರೆ. ಆದರೆ ಅಮೆರಿಕದ ಅಧಿಕಾರಿಗಳು, ಇರಾನ್ ಮೇಲಿನ ಇಸ್ರೇಲ್ ದಾಳಿಯಲ್ಲಿ ತಾವು ಭಾಗಿಯಾಗಿಲ್ಲ ಎಂದು ಸ್ಪಷ್ಟಪಡಿಸಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ