ಮತ್ತೊಂದು ಏರ್ ಇಂಡಿಯಾ ವಿಮಾನದಲ್ಲಿ ತಾಂತ್ರಿಕ ದೋಷ: ತುರ್ತು ಲ್ಯಾಂಡಿಂಗ್ - Mahanayaka

ಮತ್ತೊಂದು ಏರ್ ಇಂಡಿಯಾ ವಿಮಾನದಲ್ಲಿ ತಾಂತ್ರಿಕ ದೋಷ: ತುರ್ತು ಲ್ಯಾಂಡಿಂಗ್

air india
17/06/2025

ಕೋಲ್ಕತ್ತಾ: ಅಹಮದಾಬಾದ್ ನಲ್ಲಿ ಏರ್ ಇಂಡಿಯಾ ದುರಂತ ಮಾಸುವ ಮುನ್ನವೇ ಸ್ಯಾನ್ ​ಫ್ರಾನ್ಸಿಸ್ಕೋದಿಂದ ಮುಂಬೈಗೆ ಬರುತ್ತಿದ್ದ ಏರ್ ಇಂಡಿಯಾ ವಿಮಾನದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದೆ.

ತಾಂತ್ರಿಕ ದೋಷದ ಹಿನ್ನೆಲೆ ಪ್ರಯಾಣಿಕರನ್ನು ಕೋಲ್ಕತ್ತಾದಲ್ಲಿ ಇಳಿಸಲಾಗಿದೆ. ವಿಮಾನದ ಒಂದು ಎಂಜಿನ್‌ನಲ್ಲಿ ಸಮಸ್ಯೆ ಉಂಟಾದ ಕಾರಣ, ಈ ವಿಮಾನ ಕೋಲ್ಕತ್ತಾದಿಂದ ಮುಂಬೈಗೆ ಹಾರಲು ಸಾಧ್ಯವಾಗಲಿಲ್ಲ. ಏರ್ ಇಂಡಿಯಾ ಕೋಲ್ಕತ್ತಾದಿಂದ ಮುಂಬೈಗೆ ಮತ್ತೊಂದು ವಿಮಾನವನ್ನು ವ್ಯವಸ್ಥೆ ಮಾಡುತ್ತಿದೆ.

ಸೋಮವಾರ ಮುಂಜಾನೆ, ಮುಂಬೈನಿಂದ ಅಹಮದಾಬಾದ್‌ಗೆ ಪ್ರಯಾಣಿಸುತ್ತಿದ್ದ ಏರ್ ಇಂಡಿಯಾದ AI2493 ವಿಮಾನ ಹಾರಾಟವನ್ನು ರದ್ದುಗೊಳಿಸಲಾಗಿತ್ತು. ಈ ನಡುವೆ ದೆಹಲಿಯಿಂದ ರಾಂಚಿಗೆ ಹೊರಟಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನವು ಸೋಮವಾರ ಟೇಕ್ ಆಫ್ ಆದ ಸ್ವಲ್ಪ ಸಮಯದ ನಂತರ ತಾಂತ್ರಿಕ ದೋಷದಿಂದಾಗಿ ರಾಜಧಾನಿಗೆ ಹಿಂತಿರುಗಬೇಕಾಯಿತು. ಬೋಯಿಂಗ್ 737 ಮ್ಯಾಕ್ಸ್ 8 ವಿಮಾನವು ಮೂಲತಃ ರಾಂಚಿಯ ಬಿರ್ಸಾ ಮುಂಡಾ ವಿಮಾನ ನಿಲ್ದಾಣದಲ್ಲಿ ಸಂಜೆ 6.20 ಕ್ಕೆ ಇಳಿಯಬೇಕಿತ್ತು.

ದೆಹಲಿಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನವು ತಾಂತ್ರಿಕ ದೋಷವನ್ನು ಪೈಲಟ್ ಕಂಡುಹಿಡಿದ ಬಳಿಕ ಮಧ್ಯರಾತ್ರಿ ಹಾಂಗ್ ಕಾಂಗ್‌ಗೆ ಹಿಂತಿರುಗಬೇಕಾಯಿತು. ಬೋಯಿಂಗ್ 787–8 ಡ್ರೀಮ್‌ ಲೈನರ್ ನಿರ್ವಹಿಸುವ AI315 ವಿಮಾನವು ಹಾಂಗ್ ಕಾಂಗ್‌ನಿಂದ ಹೊರಟು ಮಧ್ಯಾಹ್ನ 12.20 ಕ್ಕೆ ದೆಹಲಿಯಲ್ಲಿ ಇಳಿಯುವ ನಿರೀಕ್ಷೆಯಿತ್ತು ಎಂದು ಫ್ಲೈಟ್ ಟ್ರ್ಯಾಕಿಂಗ್ ಸೈಟ್ ಫ್ಲೈಟ್‌ರಾಡರ್ 24 ತಿಳಿಸಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ