ಮಂಗಳೂರು: ರಸ್ತೆ ವಿಭಜಕಕ್ಕೆ ಕಾರು ಡಿಕ್ಕಿ: ಇಬ್ಬರು ಸಾವು, ಮೂವರಿಗೆ ಗಾಯ - Mahanayaka

ಮಂಗಳೂರು: ರಸ್ತೆ ವಿಭಜಕಕ್ಕೆ ಕಾರು ಡಿಕ್ಕಿ: ಇಬ್ಬರು ಸಾವು, ಮೂವರಿಗೆ ಗಾಯ

aman rao omshree
18/06/2025

ಮಂಗಳೂರು: ಕಾರು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದ ಪರಿಣಾಮ ದ.ಕ. ಜಿಲ್ಲಾ ಎನ್ ಎಸ್ ಯು ಐ ಉಪಾಧ್ಯಕ್ಷ ಸೇರಿದಂತೆ ಇಬ್ಬರು ಯುವಕರು ಮೃತಪಟ್ಟಿರುವ ಘಟನೆ ಮಂಗಳವಾರ ತಡರಾತ್ರಿ ನಡೆದಿದೆ.


Provided by

ದ.ಕ. ಜಿಲ್ಲಾ ಎನ್ ಎಸ್ ಯು ಐ ಉಪಾಧ್ಯಕ್ಷ ಓಂಶ್ರೀ(24) ಮತ್ತು ಮಲ್ಲಿಕಟ್ಟೆಯ ಅಮನ್ ರಾವ್(23) ಮೃತಪಟ್ಟವರು ಎಂದು ಗುರುತಿಸಲಾಗಿದೆ.

ತಲಪಾಡಿ ಕಡೆಯಿಂದ ಪಂಪ್ ವೆಲ್ ಕಡೆಗೆ ಬರುತ್ತಿದ್ದ ವೇಳೆ ಕಾರು ಜಪ್ಪಿನಮೊಗರು ಬಳಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದಿದೆ. ಘಟನೆ ವೇಳೆ ಕಾರಿನಲ್ಲಿ ನಾಲ್ಕೈದು ಮಂದಿ ಪ್ರಯಾಣಿಸುತ್ತಿದ್ದರು. ಕಾರನ್ನು ಅಮನ್ ರಾವ್ ಚಲಾಯಿಸುತ್ತಿದ್ದರು ಎಂದು ತಿಳಿದು ಬಂದಿದೆ.

ಘಟನೆಯಲ್ಲಿ ಇಟೆಲಿ ಪ್ರಜೆ ಸಹಿತ ಮೂವರಿಗೆ ಗಾಯವಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮಂಗಳೂರು ದಕ್ಷಿಣ ಸಂಚಾರಿ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ