ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ದರ್ಶನ್ ಎಚ್.ವಿ. ಅಧಿಕಾರ ಸ್ವೀಕಾರ - Mahanayaka

ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ದರ್ಶನ್ ಎಚ್.ವಿ. ಅಧಿಕಾರ ಸ್ವೀಕಾರ

darshan h v
18/06/2025

ಮಂಗಳೂರು:  ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ದರ್ಶನ್ ಎಚ್.ವಿ. ಅವರು ಅಧಿಕಾರ ಸ್ವೀಕರಿಸಿದರು. ನಿರ್ಗಮನ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ನೂತನ ಜಿಲ್ಲಾಧಿಕಾರಿಗೆ ಅಧಿಕಾರ ಹಸ್ತಾಂತರಿಸಿದರು.

ಜೂ. 17, 2023ರಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡಿದ್ದ ಮುಲ್ಲೈ ಮುಗಿಲನ್ ಅವರು 2 ವರ್ಷ ಪೂರ್ಣಗೊಳಿಸಿರುವ ಹಿನ್ನೆಲೆ ಅವರಿಗೆ ವರ್ಗಾವಣೆಯಾಗಿದೆ.

ನಿರ್ಗಮನ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ದಕ್ಷಿಣ ಕನ್ನಡ ಜಿಲ್ಲೆಯ ಜನಪರ ಜಿಲ್ಲಾಧಿಕಾರಿಗಳಲ್ಲಿ ಒಬ್ಬರಾಗಿದ್ದರು. ಮುಖ್ಯವಾಗಿ ಮಕ್ಕಳಿಗೆ ಅಚ್ಚುಮೆಚ್ಚಿನ ಜಿಲ್ಲಾಧಿಕಾರಿಯಾಗಿದ್ದರು. ಶಾಲಾ ಮಕ್ಕಳ ಸುರಕ್ಷತೆಗಾಗಿ ಮಳೆಗಾಲದಲ್ಲಿ ಅತೀ ಹೆಚ್ಚು ರಜೆಗಳನ್ನು ನೀಡುವ ಮೂಲಕ ಮಕ್ಕಳಿಗೆ ಅಚ್ಚು ಮೆಚ್ಚಿನ ಜಿಲ್ಲಾಧಿಕಾರಿಯಾಗಿದ್ದರು.

ರಾತ್ರಿ ವೇಳೆ ಮಕ್ಕಳು ಕರೆ ಮಾಡಿದರೂ ಸ್ಪಂದಿಸುತ್ತಿದ್ದರು. ಜಿಲ್ಲಾಧಿಕಾರಿಗಳ ನಿರ್ಗಮನ ಮಕ್ಕಳಿಗೆ ಬೇಸರ ತಂದಿದೆ. ಹೊಸ ಜಿಲ್ಲಾಧಿಕಾರಿ ದರ್ಶನ್ ಅವರು ಮುಲ್ಲೈ ಮುಗಿಲನ್ ಅವರ ಸ್ಥಾನವನ್ನು ತುಂಬಲಿದ್ದಾರೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ