ಚಲಿಸುತ್ತಿದ್ದ ಬೈಕ್ ಮೇಲೆ ಕಾಡು ಕೋಣ ದಾಳಿ: ಸವಾರನಿಗೆ ಗಾಯ - Mahanayaka
10:19 PM Thursday 11 - December 2025

ಚಲಿಸುತ್ತಿದ್ದ ಬೈಕ್ ಮೇಲೆ ಕಾಡು ಕೋಣ ದಾಳಿ: ಸವಾರನಿಗೆ ಗಾಯ

mudigere
19/06/2025

ಕೊಟ್ಟಿಗೆಹಾರ: ಕಾಡಾನೆ ದಾಳಿಯಿಂದ ಕಂಗೆಟ್ಟಿದ್ದ ಮೂಡಿಗೆರೆ ತಾಲೂಕಿನ ಜನರು ಇದೀಗ ಕಾಡು ಕೋಣ ದಾಳಿಯಿಂದ ಕಂಗೆಡುವಂತಾಗಿದೆ. ಕಾಡಿನಂಚಿನ ಕೃಷಿ ಭೂಮಿಗೆ ಕಾಡುಕೋಣಗಳು ರಾತ್ರಿ ಹಗಲೆನ್ನದೆ ಹಿಂಡು ಹಿಂಡಾಗಿ ನುಗ್ಗುತ್ತಿದ್ದು ಪ್ರಯಾಣಿಕರು ಜೀವ ಭಯದಲ್ಲಿ ಓಡಾಡುವಂತಾಗಿದೆ.

ನಿನ್ನೆ ರಾತ್ರಿ 7ಗಂಟೆ ಸಮಯದಲ್ಲಿ ಬೈಕ್ ಸವಾರನ ಮೇಲೆ ಕಾಡು ಕೋಣ ದಾಳಿ ಮಾಡಿರುವ ಘಟನೆ ತಾಲೂಕಿನ ಮತ್ತಿಕಟ್ಟೆ ರಸ್ತೆಯಲ್ಲಿ ನಡೆದಿದೆ.

ಕೆಲಸ ಮುಗಿಸಿ ಮನೆಗೆ ಹಿಂತಿರುಗುವಾಗ ಕಾಡುಕೋಣದ ದಾಳಿಗೆ ಬೈಕ್ ಸವಾರ ಮತ್ತಿಕಟ್ಟೆ ವಾಸಿ ಕುಮಾರ್ ಎಂಬುವವರು ಗಾಯಗೊಂಡಿದ್ದಾರೆ. ಕುಮಾರ್ ಎಂಬುವವರನ್ನು ಬಣಕಲ್ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಪಡೆಯುತ್ತಿದ್ದಾರೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ