ಗೃಹಲಕ್ಷ್ಮಿ ಹಣ ಬಿಡುಗಡೆಗೆ ಯಾವುದೇ ತಾಂತ್ರಿಕ ಸಮಸ್ಯೆ ‌ಇಲ್ಲ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ - Mahanayaka
10:15 AM Monday 15 - December 2025

ಗೃಹಲಕ್ಷ್ಮಿ ಹಣ ಬಿಡುಗಡೆಗೆ ಯಾವುದೇ ತಾಂತ್ರಿಕ ಸಮಸ್ಯೆ ‌ಇಲ್ಲ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

lakshmi hebbalkar
19/06/2025

ಬೆಂಗಳೂರು:  ಗೃಹಲಕ್ಷ್ಮಿ ಹಣ ಬಿಡುಗಡೆಗೆ ಯಾವುದೇ ತಾಂತ್ರಿಕ ಸಮಸ್ಯೆ ‌ಇಲ್ಲ. ಏಪ್ರಿಲ್ ತಿಂಗಳವರೆಗೂ ಹಣ ಕ್ಲಿಯರ್ ಆಗಿದೆ. ಮೇ ತಿಂಗಳ ಹಣ ಮಾತ್ರ ಬಾಕಿ ಇದ್ದು ಪ್ರತಿ‌ ತಿಂಗಳು ಹಣಕಾಸು ‌ಇಲಾಖೆಗೆ ಹಣ ಬಿಡುಗಡೆ ಆಗುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ.

ವಿಧಾನಸೌಧದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಯಾವುದೇ ಕಾರಣಕ್ಕೂ ಗೃಹಲಕ್ಷ್ಮಿ ಫಲಾನುಭವಿಗಳ ಪರಿಷ್ಕರಣೆ ಮಾಡುವುದಿಲ್ಲ. ಈಗ ಇರುವಂತೆ ವ್ಯವಸ್ಥೆ ಮುಂದುವರೆಯುತ್ತದೆ ಎಂದು ಸ್ಪಷ್ಟಪಡಿಸಿದರು.

ಈಗ ಹಣ ತಾಲೂಕು, ಜಿಲ್ಲಾ ಪಂಚಾಯತಿಗೆ ಸುತ್ತಾಡಿ ಬಿಡುಗಡೆ ಆಗಬೇಕಿದೆ. ಇದರಿಂದಾಗಿ ಒಂದು ವಾರ, ಎರಡು ವಾರ ತಡೆ ಆಗಬಹುದು ಅಷ್ಟೇ. ಬಾಕಿ ಹಣ ಬಿಡುಗಡೆ ಮಾಡುತ್ತೇವೆ ಎಂದು ತಿಳಿಸಿದರು.

ನಮ್ಮ ಇಲಾಖೆಯಿಂದ ಫಲಾನುಭವಿಗಳ ಪರಿಷ್ಕರಣೆ ಮಾಡುವುದಿಲ್ಲ. ಈಗ ಹೇಗೆ ಇದೆಯೇ ಅದೇ ರೀತಿಯಾಗಿ ಮುಂದುವರಿಸಲಾಗುತ್ತದೆ ಎಂದು ಅವರು ತಿಳಿಸಿದರು.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ