ಡಿಕ್ಕಿ ಹೊಡೆದು ವಿದ್ಯುತ್ ಕಂಬವನ್ನು 50 ಅಡಿ ದೂರ ಹೊತ್ತೊಯ್ದ ಕಾರು! - Mahanayaka

ಡಿಕ್ಕಿ ಹೊಡೆದು ವಿದ್ಯುತ್ ಕಂಬವನ್ನು 50 ಅಡಿ ದೂರ ಹೊತ್ತೊಯ್ದ ಕಾರು!

chikkamagaluru accident
21/06/2025

ಚಿಕ್ಕಮಗಳೂರು:  ಕಾರೊಂದು ಲೈಟ್ ಕಂಬಕ್ಕೆ ಡಿಕ್ಕಿ ಹೊಡೆದು, ಕಂಬವನ್ನು 50 ಅಡಿ ದೂರದ ವರೆಗೆ ಎಳೆದೊಯ್ದ ಘಟನೆ ಚಿಕ್ಕಮಗಳೂರು ತಾಲೂಕಿನ ವಸ್ತಾರೆ ಬಳಿ ನಡೆದಿದೆ.


Provided by

ಚಿಕ್ಕಮಗಳೂರು ನೋಂದಣಿಯ ಸೆಲೋರಿಯಾ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದ್ದು, ಈ ವೇಳೆ ವಿದ್ಯುತ್ ಕಂಬ ತುಂಡಾಗಿದ್ದು, ಮಣ್ಣಿನಡಿಯಿಂದಲೇ ಕಂಬ ಕಿತ್ತು ಕಾರಿನ ಮೇಲೆ ಬಿದ್ದಿದೆ.  ಕಾರು ವಿದ್ಯುತ್ ಕಂಬವನ್ನು 50 ಅಡಿ ದೂರದವರೆಗೆ ಎಳೆದೊಯ್ದಿದೆ.

ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿಯಾಗುತ್ತಿದ್ದಂತೆಯೇ ಕಾರಿನ ಏರ್ ಬ್ಯಾಗ್ ಓಪನ್ ಆಗಿದೆ. ಹೀಗಾಗಿ ಕಾರು ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಕಂಬ ಮುರಿದು ಬೀಳುತ್ತಿದ್ದಂತೆ ವಿದ್ಯುತ್ ಸಂಪರ್ಕ ಕಡಿತವಾದ ಕಾರಣ ಹೆಚ್ಚಿನ ಅನಾಹುತ ತಪ್ಪಿದಂತಾಗಿದೆ ಆಲ್ದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ