ಸರ್ಕಾರಿ ಬಸ್ ಗಳ ಅಪಘಾತ ಪ್ರಕರಣ ಹೆಚ್ಚಳ: ನಾಲ್ಕು ನಿಗಮಗಳ ಚಾಲಕರಿಗೆ ಖಡಕ್ ವಾರ್ನಿಂಗ್ - Mahanayaka

ಸರ್ಕಾರಿ ಬಸ್ ಗಳ ಅಪಘಾತ ಪ್ರಕರಣ ಹೆಚ್ಚಳ: ನಾಲ್ಕು ನಿಗಮಗಳ ಚಾಲಕರಿಗೆ ಖಡಕ್ ವಾರ್ನಿಂಗ್

ksrtc car
23/06/2025


Provided by

ಬೆಂಗಳೂರು: KSRTC—BMTC ಸೇರಿದಂತೆ ನಾಲ್ಕು ನಿಗಮದ ಬಸ್ ಚಾಲಕರಿಂದ ಅಪಘಾತ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗುತ್ತಿರುವ ಹಿನ್ನೆಲೆ  ಇದಕ್ಕೆ ಕಡಿವಾಣ ಹಾಕಲು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಖಡಕ್ ಸೂಚನೆ ನೀಡಿದ್ದಾರೆ.

ಬಿಎಂಟಿಸಿ, ಕೆಎಸ್ಆರ್​​ಟಿಸಿ, ಕಲ್ಯಾಣ ಕರ್ನಾಟಕ, ವಾಯುವ್ಯ ಕರ್ನಾಟಕ ಸೇರಿದಂತೆ ನಾಲ್ಕು ನಿಗಮಗಳಿಗೆ ಅನ್ವಯವಾಗುವಂತೆಯೇ ಕ್ರಮವಹಿಸಲು ಅಧಿಕಾರಿಗಳಿಗೆ ಸಚಿವ ರಾಮಲಿಂಗಾರೆಡ್ಡಿ ಸೂಚನೆ ನೀಡಿದ್ದಾರೆ.

ಯಾವ ಸರ್ಕಾರಿ ಬಸ್ ಚಾಲಕರು ಅಜಾಗರೂಕತೆಯಿಂದ ಚಾಲನೆ ಮಾಡಿ ತೊಂದರೆ ಉಂಟು ಮಾಡುತ್ತಾರೋ ಅಂತಹ ಚಾಲಕರ ವಿರುದ್ಧ ಮುಲಾಜಿಲ್ಲದೆ ಕಠಿಣ ಕ್ರಮಕ್ಕೆ ತೆಗೆದುಕೊಳ್ಳುವಂತೆ ತಿಳಿಸಿದ್ದಾರೆ.

ಅಷ್ಟೇ ಅಲ್ಲ, ಯಾವ ಚಾಲಕರು ಈ ಹಿಂದೆ ಅಜಾಗರೂಕತೆಯಿಂದ ಚಾಲನೆ ಮಾಡಿ ಸಮಸ್ಯೆ ಉಂಟು ಮಾಡಿದ್ದಾರೋ ಅಂತಹ ಚಾಲಕರ ಲೀಸ್ಟ್ ರೆಡಿ ಮಾಡಿ, ಮತ್ತೊಮ್ಮೆ ಅಂತಹ ಚಾಲಕರು ಅದೇ ತಪ್ಪು ಮಾಡಿದಲ್ಲಿ ಮುಲಾಜಿಲ್ಲದೇ ವಜಾ ಮಾಡುವಂತೆ ಸೂಚನೆ ಕೊಟ್ಟಿದ್ದಾರೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ