ರಸ್ತೆ ಗುಂಡಿ ತಪ್ಪಿಸಲು ಹೋಗಿ ವ್ಯಕ್ತಿ ಸಾವು: ಘಟನೆ ಖಂಡಿಸಿ ಸಾರ್ವಜನಿಕರಿಂದ ವಿನೂತನ ಪ್ರತಿಭಟನೆ - Mahanayaka
4:37 AM Thursday 11 - December 2025

ರಸ್ತೆ ಗುಂಡಿ ತಪ್ಪಿಸಲು ಹೋಗಿ ವ್ಯಕ್ತಿ ಸಾವು: ಘಟನೆ ಖಂಡಿಸಿ ಸಾರ್ವಜನಿಕರಿಂದ ವಿನೂತನ ಪ್ರತಿಭಟನೆ

protest
24/06/2025

ಚಿಕ್ಕಮಗಳೂರು: ರಸ್ತೆ ಗುಂಡಿ ತಪ್ಪಿಸಲು ಹೋಗಿ ಕಾರು ಡಿಕ್ಕಿಯಾಗಿ ವ್ಯಕ್ತಿಯೊಬ್ಬರು ಸಾವನ್ನಪ್ಪಿದ ಘಟನೆಯನ್ನು ಖಂಡಿಸಿದ ಸಾರ್ವಜನಿಕರು ರಸ್ತೆಯಲ್ಲಿ ಬಾಳೆ ಗಿಡ ನೆಟ್ಟು ಸರ್ಕಾರ ಹಾಗೂ ಸ್ಥಳೀಯ ಶಾಸಕರ ವಿರುದ್ಧ ಪ್ರತಿಭಟನೆ ನಡೆಸಿದ ಘಟನೆ ಎನ್.ಆರ್.ಪುರ ತಾಲೂಕಿನ ಮಡಬೂರು ಬಳಿ ನಡೆದಿದೆ.

ಚಂದ್ರಶೇಖರ್ (55) ಮೃತ ದುರ್ದೈವಿಯಾಗಿದ್ದಾರೆ. ರಸ್ತೆಯ ಗುಂಡಿ ತಪ್ಪಿಸಲು ಮುಂದಾದ ವೇಳೆ ಇವರಿಗೆ ಕಾರು ಡಿಕ್ಕಿಯಾಗಿತ್ತು ಪರಿಣಾಮವಾಗಿ ತೀವ್ರವಾಗಿ ಗಾಯಗೊಂಡಿದ್ದ ಚಂದ್ರಶೇಖರ್ ಸ್ಥಳದಲ್ಲೇ  ಸಾವನ್ನಪ್ಪಿದ್ದರು.

ಘಟನೆಯನ್ನು ಖಂಡಿಸಿದ ಸಾರ್ವಜನಿಕರು ರಸ್ತೆಗೆ ಬಾಳೆ ಗಿಡ ನೆಟ್ಟು ಆಕ್ರೋಶ ವ್ಯಕ್ತಪಡಿಸಿದ್ದು, ಕೂಡಲೇ ರಸ್ತೆ ಗುಂಡಿಗಳನ್ನ ಮುಚ್ಚಿ ರಸ್ತೆ ಸುರಕ್ಷತೆ ಕಲ್ಪಿಸುವಂತೆ  ಆಗ್ರಹಿಸಿದರು.

ಚಿಕ್ಕಮಗಳೂರು ಜಿಲ್ಲೆ ಎನ್.ಆರ್.ಪುರ ತಾಲೂಕಿನ ಎನ್.ಆರ್‌.ಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ