ಗಾಳಿಯಲ್ಲಿ ಗುಂಡು ಹಾರಿಸಿ ಹುಟ್ಟುಹಬ್ಬ ಆಚರಿಸಿದ ಗ್ರಾ.ಪಂ., ಸದಸ್ಯ!

ಬೆಳಗಾವಿ: ಗ್ರಾಮ ಪಂಚಾಯತ್ ಸದಸ್ಯನೊಬ್ಬ ಗಾಳಿಯಲ್ಲಿ ಗುಂಡು ಹಾರಿಸಿ ಶೋಕಿ ಮಾಡಿ ಹುಟ್ಟು ಹಬ್ಬ ಆಚರಿಸಿಕೊಂಡ ಘಟನೆ ರಾಯಬಾಗ ತಾಲೂಕಿನ ಕುಡಚಿ ಪಟ್ಟಣದಲ್ಲಿ ನಡೆದಿದೆ.
ಬಾಬಾಜಾನ್ ಖಾಲಿಮುಂಡಾಸೈ ಎಂಬಾತ ಕುಡಚಿ ಪಟ್ಟಣದ ಗ್ರಾಮ ಪಂಚಾಯತಿ ಸದಸ್ಯನಾಗಿದ್ದಾನೆ. ಕೈಯಲ್ಲಿ ಬಂದೂಕು ಹಿಡಿದು ರಸ್ತೆಯಲ್ಲೇ ಗಾಳಿಯಲ್ಲಿ ಗುಂಡು ಹಾರಿಸಿ ಗೂಂಡಾ ವರ್ತನೆ ಪ್ರದರ್ಶಿಸಲಾಗಿದೆ.
ಇನ್ನೂ ಕೇಕ್ ಕತ್ತರಿಸುವ ವೇಳೆ ಯುವಕರು ಕೈಯಲ್ಲಿ ಚಾಕು ಹಿಡಿದುಕೊಂಡು ಭಯದ ವಾತಾವರಣ ಸೃಷ್ಟಿಸಿದರು. ಪಕ್ಕದಲ್ಲೇ ಪೊಲೀಸ್ ಠಾಣೆ ಇದ್ದರೂ ನಿರ್ಲಕ್ಷ್ಯ ವಹಿಸಲಾಗಿದೆ ಅನ್ನೋ ಆರೋಪ ಕೂಡ ಕೇಳಿ ಬಂದಿದೆ.
ನಡು ರಸ್ತೆಯಲ್ಲಿ ಫೈರಿಂಗ್ ಮಾಡಿ ಅಸಭ್ಯ ವರ್ತನೆ ಮಾಡಿದ ವಿಡಿಯೋ ವೈರಲ್ ಆದ ಬೆನ್ನಲ್ಲೇ ಎಚ್ಚೆತ್ತುಕೊಂಡ ಕುಡಚಿ ಪೊಲೀಸರು ಆರೋಪಿ ಬಾಬಾಜಾನ್ ಖಾಲಿಮುಂಡಾಸೈನನ್ನು ಬಂಧಿಸಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD