RSS ಷಡ್ಯಂತ್ರ ಬಯಲುಗೊಂಡರೆ ಸೌಹಾರ್ದ ಸಮಾಜ ನಿರ್ಮಾಣದ ಹಾದಿ ಸುಲಭ: ಬಿ.ಕೆ.ಇಮ್ತಿಯಾಜ್

ಮಂಗಳೂರು: ಡಿವೈಎಫ್ ಐ(DYFI) ಬಜಾಲ್ ಪಕ್ಕಲಡ್ಕ ಘಟಕದ ವತಿಯಿಂದ ಕಾಂ ಶ್ರೀನಿವಾಸ್ ಬಜಾಲ್ ಅವರ 23ನೇ ವರುಷದ ಹುತಾತ್ಮ ದಿನದ ಅಂಗವಾಗಿ ಬಜಾಲ್ ಭಗತ್ ಸಿಂಗ್ ಭವನದಲ್ಲಿ ಸೌಹಾರ್ದ ಯುವ ಸಮ್ಮಿಲನ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮನ ನಡೆಯಿತು.
ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಡಿವೈಎಫ್ ಐ ದ.ಕ. ಜಿಲ್ಲಾಧ್ಯಕ್ಷರಾದ ಬಿ.ಕೆ.ಇಮ್ತಿಯಾಜ್, ದೇಶದಲ್ಲಿ ಈವರೆಗೂ ವಿವಿಧ ಸ್ವರೂಪದಲ್ಲಿ ನಡೆದ ಎಲ್ಲಾ ಕೋಮುಗಲಭೆಯ ಹಿಂದೆ ಆರ್.ಎಸ್.ಎಸ್. (RSS) ವಿಭಜನೆಯ ರಾಜಕಾರಣ ಅಡಗಿದೆ ಎಂದು ಆರೋಪಿಸಿದರು.
ಹಿಂದೂ ಸಮುದಾಯವನ್ನು ಅಲ್ಪಸಂಖ್ಯಾತ ಮುಸ್ಲಿಂ ಸಮುದಾಯದ ವಿರುದ್ಧ ಎತ್ತಿ ಕಟ್ಟಿ ನಿರಂತರ ನಡೆಸಿದ ದಾಳಿ ದಬ್ಬಾಳಿಕೆಯಿಂದ ಪರಸ್ಪರ ಮಾನವೀಯ ಸಂಬಂಧಗಳನ್ನು ಘಾಸಿಗೊಳಿಸಿದೆ. ಈ ದೇಶದ ಕೋಮುರಾಜಕಾರಣದಲ್ಲಿ ಅರಾಜಕತೆಯನ್ನು ಸೃಷ್ಟಿಸಿರುವ ಆರ್.ಎಸ್.ಎಸ್ ನ ಷಡ್ಯಂತ್ರಗಳು ಬಯಲುಗೊಂಡರೆ ಮಾತ್ರವೇ ಸೌಹಾರ್ದ ಸಮಾಜ ನಿರ್ಮಾಣದ ಹಾದಿ ಸುಲಭವಾಗಲಿದೆ ಎಂದು ಅವರು ಹೇಳಿದರು.
ಜಪ್ಪಿನಮೊಗರು ಸಾರ್ವಜನಿಕ ಗಣೇಶೋತ್ಸವ ಸಮಿತಿಯ(Ganesh Festival Committee) ಕಾರ್ಯಾಧ್ಯಕ್ಷರಾದ ಸುಧಾಕರ್ ಕುಲಾಲ್ ಮಾತನಾಡಿ, ಬಜಾಲ್, ಜಪ್ಪಿನಮೊಗರು ಸುತ್ತಮುತ್ತಲ ಪರಿಸರದಲ್ಲಿ ಈವರೆಗೂ ಮತೀಯ ಹಿಂಸೆಗಳು ನಡೆದಿಲ್ಲ. ಇಂತಹ ಸೌಹಾರ್ದಯುತ ವಾತಾವರಣ ಇಲ್ಲಿ ಉಳಿಸಲು ಸಾಧ್ಯವಾಗಿರೋದು ಇಲ್ಲಿನ ಜಾತ್ಯಾತೀತ ಶಕ್ತಿಗಳ ಸಮಾಜಮುಖಿ ಚಿಂತನೆಗಳಿಂದ ಎಂದರು.
ಡಿವೈಎಫ್ ಐ ದ.ಕ ಜಿಲ್ಲಾ ಕಾರ್ಯದರ್ಶಿ ಸಂತೋಷ್ ಬಜಾಲ್ ಮಾತನಾಡಿ, ಯುವಜನರು ಸಂಘಪರಿವಾರದ ಮತೀಯ ರಾಜಕಾರಣಕ್ಕೆ ಬಲಿಯಾಗದೆ, ಬದುಕಿನ ರಾಜಕಾರಣದ ಪ್ರಶ್ನೆಯನ್ನು ಎತ್ತಿ ಹಿಡಿಯಲು ಮುಂದಾಗಬೇಕು ಎಂದು ಕರೆ ನೀಡಿದರು.
ಕಾವುಬೈಲ್ ಪಂಚಲಿಂಗೇಶ್ವರ ದೇವಸ್ಥಾನ(Panchalingeshwar Temple)ದ ಆಡಳಿತ ವ್ಯವಸ್ಥಾಪಕ ಸಮಿತಿಯ ಸದಸ್ಯರಾದ ಬಿ. ನಾಗೇಶ್ ಶೆಟ್ಟಿ, ಬಜಾಲ್ ಹೋಲಿ ಸ್ಪಿರೀಟ್ ಚರ್ಚ್ ಸಮಿತಿಯ ಪದಾಧಿಕಾರಿ ವಿಲ್ಪ್ರೇಡ್ ಬಜಾಲ್, ಯುವ ಕಾಂಗ್ರೇಸ್ ಮುಖಂಡ ಆಸೀಫ್ ಬಜಾಲ್ , ಡಿವೈಎಫ್ಐ ಜಿಲ್ಲಾ ಮುಖಂಡರಾದ ರಿಜ್ವಾನ್ ಹರೇಕಳ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.
ವೇದಿಕೆಯಲ್ಲಿ ಮಾಜಿ ಕಾರ್ಪೊರೇಟರ್ ಜಯಂತಿ ಬಿ. ಶೆಟ್ಟಿ, ಡಿಎಸ್ ಎಸ್ ಮುಖಂಡ ಕಮಲಾಕ್ಷ ಬಜಾಲ್, ರಿಯಾಜ್ ಕಣ್ಣೂರು ಉಪಸ್ಥಿತರಿದ್ದರು. ಸಭೆಯ ಅಧ್ಯಕ್ಷತೆಯನ್ನು ಡಿವೈಎಫ್ ಐ ಬಜಾಲ್ ಪಕ್ಕಲಡ್ಕ ಘಟಕದ ಅಧ್ಯಕ್ಷರಾದ ಪ್ರಕಾಶ್ ಶೆಟ್ಟಿ ವಹಿಸಿದ್ದರು. ಡಿವೈಎಫ್ಐ ಮುಖಂಡ ದೀಪಕ್ ಬಜಾಲ್ ಸ್ವಾಗತಿಸಿ, ಜಗದೀಶ್ ಬಜಾಲ್ ವಂದಿಸಿದರು.
ಇದೇ ವೇದಿಕೆಯಲ್ಲಿ ಬಜಾಲ್ ವಿಭಾಗ ಮಟ್ಟದಲ್ಲಿ ಎಸ್.ಎಸ್.ಎಲ್.ಸಿ.(SSLC) ಪರೀಕ್ಷೇಯಲ್ಲಿ ಗರಿಷ್ಟ ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಅಭಿನಂದಿಸಲಾಯಿತು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: