ಒಂದೇ ದಿನ ಇಬ್ಬರು ಹೃದಯಾಘಾತದಿಂದ ಸಾವು

ಧಾರವಾಡ: ಧಾರವಾಡದಲ್ಲಿ ಒಂದೇ ದಿನ ಇಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದ್ದು, ಹೃದಯಾಘಾತ ಪ್ರಕರಣಗಳು ದಿನದಿಂದ ದಿನಕ್ಕೆ ಆತಂಕವನ್ನು ಸೃಷ್ಟಿ ಮಾಡುತ್ತಿದೆ.
ಜಿಲ್ಲೆಯ ನವಲಗುಂದ ಪಟ್ಟಣದ ಮುತ್ತುಪ್ಪ ಶಂಕ್ರಪ್ಪ ಪೂಜಾರ (44) ಹಾಗೂ ನವಲಗುಂದದ ಯಮನೂರ ಗ್ರಾಮದ ನಿವಾಸಿ ಕೇಬಲ್ ಆಪರೇಟರ್ ಆಗಿ ಕೆಲಸ ಮಾಡುತ್ತಿದ್ದ ಫಕಿರಪ್ಪ ಬಣಗಾರ (45) ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ರಾತ್ರಿ ಮಲಗಿದ್ದ ವೇಳೆ ಈ ಇಬ್ಬರು ಕೂಡ ಹೃದಯಾಘಾತಕ್ಕೊಳಗಾಗಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ರಾಜ್ಯದಲ್ಲಿ ಹೃದಯಾಘಾತ ಪ್ರಕರಣಗಳ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದೆ. ಈಗಾಗಲೇ ರಾಜ್ಯ ಸರ್ಕಾರ ಹೃದಯಾಘಾತ ಪ್ರಕರಣಗಳ ಬಗ್ಗೆ ತಜ್ಞರಿಂದ ಮಾಹಿತಿ ಪಡೆದುಕೊಳ್ಳುತ್ತಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD